alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲ ಸಲ್ಲದ್ದನ್ನು ಮಾತನಾಡಿ ಎಡವಟ್ಟು ಮಾಡಿಕೊಂಡರಾ ರೆಡ್ಡಿ…?

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವಿಗಾಗಿ ಮೂರು ಪಕ್ಷಗಳು ಭರ್ಜರಿ ಕಾರ್ಯತಂತ್ರ ರೂಪಿಸುತ್ತಿವೆ.

ಪ್ರಚಾರದ ಸಂದರ್ಭದಲ್ಲಿ ಆರೋಪ-ಪ್ರತ್ಯಾರೋಪಗಳು ಸಾಮಾನ್ಯವಾಗಿದ್ದರೂ ಇದು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ವೈಯಕ್ತಿಕ ಆರೋಪಗಳಿಗೆ ಬಂದು ಮುಟ್ಟಿದೆ.

ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶಾಸಕ ಶ್ರೀರಾಮುಲು ಅವರ ಸಹೋದರಿ ಜೆ. ಶಾಂತಾ ಅವರ ಪರ ಪ್ರಚಾರಕ್ಕಾಗಿ ಬಳ್ಳಾರಿ ಗಡಿಭಾಗದಲ್ಲಿ ಬೀಡುಬಿಟ್ಟಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕುರಿತು ಆಡಿರುವ ಮಾತು ಈಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ನನ್ನನ್ನು ಸಿದ್ದರಾಮಯ್ಯ ಅನ್ಯಾಯವಾಗಿ ಜೈಲಿಗೆ ಹಾಕಿಸಿದರು. ಇದರಿಂದಾಗಿಯೇ ದೇವರು ಅವರ ಮಗನನ್ನು ದೂರ ಮಾಡಿದ್ದಾನೆ ಎಂದು ಜನಾರ್ದನ ರೆಡ್ಡಿ ಹೇಳಿದ್ದು, ಈ ಮೂಲಕ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಸಿದ್ದರಾಮಯ್ಯನವರ ಅಕಾಲಿಕ ಸಾವನ್ನು ಪ್ರಸ್ತಾಪಿಸಿದ್ದಾರೆ.

ಇದು ಈಗ ರಾಜಕೀಯ ವಲಯದಲ್ಲಿ ಮಾತ್ರವಲ್ಲದೆ ಸಾರ್ವಜನಿಕ ಮಟ್ಟದಲ್ಲೂ ಚರ್ಚೆಗೆ ಕಾರಣವಾಗಿದ್ದು, ಸಾವನ್ನು ರಾಜಕಾರಣಕ್ಕೆ ಎಳೆದುಕೊಂಡು ತರುವ ಮೂಲಕ ಜನಾರ್ದನ ರೆಡ್ಡಿ ಕೀಳು ಮಟ್ಟದ ರಾಜಕಾರಣ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಈ ಮಾತುಗಳನ್ನಾಡುವ ಮೂಲಕ ಜನಾರ್ದನ ರೆಡ್ಡಿ, ಎಡವಟ್ಟು ಮಾಡಿಕೊಂಡರಾ, ಇದು ಚುನಾವಣೆ ಮೇಲೆ ಪರಿಣಾಮ ಬೀರಲಿದೆಯಾ ಎಂಬ ಪ್ರಶ್ನೆ ಈಗ ಮೂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...