alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಂಪುಟ ವಿಸ್ತರಣೆ’ ಕುರಿತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದೇನು…?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗುತ್ತಲೇ ಇದೆ. ಸಚಿವ ಸ್ಥಾನಾಕಾಂಕ್ಷಿ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ಬೆಳಗಾವಿ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ನಡೆಯಬಹುದೆಂಬ ನಿರೀಕ್ಷೆ ಮತ್ತೆ ಹುಸಿಯಾಗಿದೆ.

ಬುಧವಾರದಂದು ದೋಸ್ತಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಭೆ, ಸಂಪುಟ ವಿಸ್ತರಣೆ ಕುರಿತಂತೆ ತೀರ್ಮಾನ ಕೈಗೊಂಡಿದ್ದು, ಬೆಳಗಾವಿ ಅಧಿವೇಶನದ ಬಳಿಕ ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಪಡಿಸಿದೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸೆಂಬರ್ 22ರಂದು ಸಂಪುಟ ವಿಸ್ತರಣೆ ಜೊತೆಗೆ ನಿಗಮ-ಮಂಡಳಿಗಳಿಗೂ ನೇಮಕವಾಗಲಿದೆ ಎಂದಿದ್ದಾರೆ. ಜೊತೆಗೆ ಪಾರ್ಲಿಮೆಂಟರಿ ಸೆಕ್ರೆಟರಿಗಳನ್ನೂ ನೇಮಕ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...