alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಪುಟ ಸೇರಲು ಶುರುವಾಯ್ತು ಲಾಬಿ

vidan

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂಪುಟ ವಿಸ್ತರಣೆ, ಪುನರ್ ರಚನೆಯ ಸುಳಿವು ನೀಡಿರುವಂತೆಯೇ, ಕಾಂಗ್ರೆಸ್ ಪಾಳೆಯದಲ್ಲಿ ಬಿರುಸಿನ ಚಟುವಟಿಕೆ ಗರಿಗೆದರಿವೆ. ಯುಗಾದಿಯಂದು ಪಕ್ಷದ ಕಾರ್ಯಕರ್ತರಿಗೆ ನಿಗಮ, ಮಂಡಳಿಗಳಿಗೆ ನೇಮಕ ಮಾಡಿ ಸಿಎಂ ಗಿಫ್ಟ್ ಕೊಟ್ಟಿದ್ದರು.

ಈ ತಿಂಗಳಲ್ಲೇ ಸಚಿವ ಸಂಪುಟ ಪುನರ್ ರಚನೆ ಮಾಡುವುದಾಗಿ ಸಿಎಂ ಈಗಾಗಲೇ ಹೇಳಿದ್ದಾರೆ. ಸಿಎಂ ನೀಡಿದ ಹೇಳಿಕೆ ಕಾಂಗ್ರೆಸ್ ಶಾಸಕರಲ್ಲಿ ಸಂಚಲನ ಮೂಡಿಸಿದ್ದು, ಸಚಿವ ಸ್ಥಾನಕ್ಕೆ ಲಾಬಿ ಶುರುವಾಗಿದೆ. ಈಗಾಗಲೇ 3 ಬಣಗಳು ರೆಡಿಯಾಗಿವೆ. ಕಾಂಗ್ರೆಸ್ ಸಮಾನ ಮನಸ್ಕ ಶಾಸಕರ ಹೆಸರಿನಲ್ಲಿ ಕೆಲವು ಶಾಸಕರು ಒಟ್ಟಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಯನ್ನು ಮಂಡಿಸಿದ್ದಾರೆ. ಇದರೊಂದಿಗೆ ಹಿರಿಯ ಶಾಸಕರು ಕೂಡ ಬಣ ರಚಿಸಿಕೊಂಡು ಹಿರಿಯರಿಗೆ ಮಣೆ ಹಾಕುವಂತೆ ಒತ್ತಡ ಹೇರಿದ್ದಾರೆ ಎಂದು ಹೇಳಲಾಗಿದೆ.

ಸಮಾನ ಮನಸ್ಕ ಶಾಸಕರು, ಹಿರಿಯ ಶಾಸಕರು ಸಚಿವ ಸ್ಥಾನಕ್ಕೆ ಬೇಡಿಕೆ ಸಲ್ಲಿಸಿರುವಂತೆಯೇ, ಒಕ್ಕಲಿಗ ಶಾಸಕರು ಕೂಡ, ಸಂಪುಟದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕೆಂದು ಬೇಡಿಕೆ ಮಂಡಿಸಿದ್ದಾರೆ. ಸಚಿವ ಎ.ಮಂಜು ನೇತೃತ್ವದಲ್ಲಿ ಒಕ್ಕಲಿಗ ಶಾಸಕರು ಲಾಬಿ ನಡೆಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...