alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಜಿ ಸಿಎಂ ಸಿದ್ದರಾಮಯ್ಯನವರ ಕೊರಳಿಗೆ ಸುತ್ತಿಕೊಂಡಿದೆ 25 ವರ್ಷಗಳ ಹಿಂದಿನ ಪ್ರಕರಣ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಐದು ವರ್ಷಗಳ ಅಧಿಕಾರಾವಧಿಯಲ್ಲಿ ಯಾವುದೇ ಹಗರಣಗಳಲ್ಲಿ ಸಿಲುಕಿಕೊಳ್ಳದೆ ತಮ್ಮ ಸ್ಥಾನದಿಂದ ನಿರ್ಗಮಿಸಿದ್ದರು. ಆದರೆ ಇದೀಗ 25 ವರ್ಷಗಳ ಹಿಂದಿನ ಪ್ರಕರಣವೊಂದು ಸಿದ್ದರಾಮಯ್ಯನವರ ಕೊರಳಿಗೆ ಸುತ್ತಿಕೊಳ್ಳುವ ಮೂಲಕ ಸಂಕಷ್ಟ ತಂದೊಡ್ಡಿದೆ.

ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಉಭಯ ಪಕ್ಷಗಳ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಸಮನ್ವಯ ಸಮಿತಿ ರಚಿಸಲಾಗಿದ್ದು, ಇದರ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯನವರ ವಿರುದ್ಧ ಅಕ್ರಮದ ಆರೋಪ ಕೇಳಿ ಬಂದಿದೆ.

ದಿವಂಗತ ಜೆ.ಹೆಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು, ನಿಯಮಾವಳಿಗಳನ್ನು ಉಲ್ಲಂಘಿಸಿ ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರದಿಂದ ವಿಜಯನಗರ 2ನೇ ಹಂತದಲ್ಲಿ ಅಕ್ರಮವಾಗಿ ನಿವೇಶನ ಪಡೆದಿದ್ದಾರೆನ್ನಲಾಗಿದೆ.

ವಕೀಲರಾದ ಗಂಗರಾಜು ಹಾಗೂ ಸಂಗಮೇಶ್ ಎಂಬವರು ಸಿದ್ದರಾಮಯ್ಯನವರ ವಿರುದ್ಧ ಈ ಕುರಿತು ದೂರು ದಾಖಲಿಸಿದ್ದು, ಇದೀಗ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...