alex Certify
ಕನ್ನಡ ದುನಿಯಾ       Mobile App
       

Kannada Duniya

‘ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ’

ನವದೆಹಲಿ: ತಕ್ಷಣವೇ 7 ಟಿ.ಎಂ.ಸಿ. ನೀರು ಬಿಡಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಪತ್ರ ಬರೆದಿದ್ದಕ್ಕೆ ಮುಖ್ಯಮಂತ್ರಿ ಸಿ.ಎಂ. ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ನಮ್ಮಲ್ಲೇ ಕಾವೇರಿ ಕಣಿವೆಯ ಡ್ಯಾಂನಲ್ಲಿ ನೀರಿಲ್ಲ. ಕಾವೇರಿ ನ್ಯಾಯಾಧೀಕರಣ ಮುಂದಿನ ತಿಂಗಳು ತೀರ್ಪು ನೀಡುವ ಸಾಧ್ಯತೆ ಇದೆ. ಈಗ ನೀರು ಬಿಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಡ್ಯಾಂಗಳಲ್ಲಿ ನೀರಿಲ್ಲದ ಕಾರಣ ನೀರು ಬಿಡುವ ಪ್ರಶ್ನೆಯೇ ಇಲ್ಲ. ಮುಂದಿನ ತಿಂಗಳು ಬರುವ ತೀರ್ಪು ರಾಜ್ಯದ ಪರವಾಗಿ ಬರುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನ್ಯಾಯಾಧೀಕರಣದ ಸೂಚನೆಯಂತೆ ಇನ್ನೂ 68 ಟಿ.ಎಂ.ಸಿ. ನೀರು ಬಿಡಬೇಕಿದೆ. ತಕ್ಷಣ 7, ನಂತರದಲ್ಲಿ 8 ಟಿಎಂಸಿ ನೀರು ಬಿಡುವಂತೆ ಪಳನಿಸ್ವಾಮಿ ಪತ್ರ ಬರೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...