alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಮುಂಡೇಶ್ವರಿ ಕ್ಷೇತ್ರದ ಸೋಲಿಗೆ ಏನೇಳಿದ್ದಾರೆ ಗೊತ್ತಾ ಸಿದ್ದರಾಮಯ್ಯ?

ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸಿದ ಕಾರಣಕ್ಕಾಗಿ ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ತೆರಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಮರಳಿದ್ದಾರೆ.

ಚಾಮುಂಡೇಶ್ವರಿ ಹಾಗೂ ಬಾದಾಮಿ ವಿಧಾನಸಭಾ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯನವರು ಸ್ಪರ್ಧಿಸಿದ್ದು, ಚಾಮುಂಡೇಶ್ವರಿಯಲ್ಲಿ ಪರಾಭವಗೊಂಡಿದ್ದರು. ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ಸೋಲಿನಿಂದ ತಾವು ಎದೆಗುಂದಿಲ್ಲ ಎಂದಿದ್ದಾರೆ.

ಚುನಾವಣೆಯಲ್ಲಿ ನಾನೇನು ಇದೇ ಮೊದಲ ಬಾರಿಗೆ ಸೋಲನ್ನಪ್ಪಿಲ್ಲ. ಒಳ್ಳೆಯವರಿಗೆ ಕಷ್ಟ ಬರುವುದು ಸಹಜ. ಅದೇ ಜನರು ಮುಂದೆ ಕೈ ಹಿಡಿಯುತ್ತಾರೆ. ಇಂದಿರಾ ಗಾಂಧಿ, ಅಂಬೇಡ್ಕರ್, ದೇವರಾಜ ಅರಸ್ ರಂತಹ ನಾಯಕರೂ ಸೋಲು ಕಂಡಿದ್ದರು ಎಂದು ಹೇಳಿದ ಸಿದ್ದರಾಮಯ್ಯ, ಯಾರು ಏನೇ ಹೇಳಿದರೂ ಸೋಲಿನ ಬಗ್ಗೆ ತಾವು ತಲೆ ಕೆಡಿಸಿಕೊಳ್ಳುವುದಿಲ್ಲವೆಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...