alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಸಿದ್ದರಾಮಯ್ಯ ವಿರುದ್ದ ಹೈಕಮಾಂಡ್ ಗೆ ಪತ್ರ

h vishwanath ex ministerಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಚಿವ ಸ್ಥಾನ ಕಳೆದುಕೊಂಡ ಶ್ರೀನಿವಾಸ್ ಪ್ರಸಾದ್ ನೇರಾನೇರ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಮಾಜಿ ಸಚಿವ ಹೆಚ್. ವಿಶ್ವನಾಥ್ ಸಿದ್ದರಾಮಯ್ಯನವರ ಕಾರ್ಯ ವೈಖರಿ ಕುರಿತು ಹೈಕಮಾಂಡ್ ಗೆ 3 ಪುಟಗಳ ಸುದೀರ್ಘ ಪತ್ರ ಬರೆದಿದ್ದಾರೆ.

ದೇವೇಗೌಡರು ಸಿದ್ದರಾಮಯ್ಯನವರನ್ನು ಪಕ್ಷದಿಂದ ಹೊರ ಹಾಕಿದಾಗ ಅವರಿಗೆ ಆಶ್ರಯ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಪಕ್ಷದಲ್ಲಿ ಆನೇಕ ಹಿರಿಯ ನಾಯಕರಿದ್ದರೂ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಅಧಿಕಾರ ನೀಡಿದ್ದು, ಈಗ ಸಿದ್ದರಾಮಯ್ಯನವರು ಪಕ್ಷಕ್ಕಿಂತ ದೊಡ್ಡವರಂತೆ ವರ್ತಿಸುತ್ತಿದ್ದಾರೆಂದು ಹೆಚ್. ವಿಶ್ವನಾಥ್ ತಮ್ಮ ಪತ್ರದಲ್ಲಿ ದೂರಿದ್ದಾರೆ.

ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲವೆಂದು ಹೇಳಿರುವ ವಿಶ್ವನಾಥ್, ಒಂದು ವೇಳೆ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಪಕ್ಷ ಸ್ಥಾನಮಾನ ನೀಡದಿದ್ದಲ್ಲಿ ಅವರು ರಾಜಕೀಯವಾಗಿ ನೆಲೆ ಕಳೆದುಕೊಳ್ಳುತ್ತಿದ್ದರೆಂದಿದ್ದಾರೆ. ಸದ್ಯ ತಲೆದೋರಿರುವ ಪರಿಸ್ಥಿತಿಯನ್ನು ಸರಿಪಡಿಸಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನೇ ರಾಜ್ಯಕ್ಕೆ ಕಳುಹಿಸಿಕೊಡುವಂತೆ ವಿಶ್ವನಾಥ್ ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...