alex Certify
ಕನ್ನಡ ದುನಿಯಾ       Mobile App
       

Kannada Duniya

ಬಂಡಾಯ ಶಾಸಕರಿಗೆ ತಿರುಗೇಟು ನೀಡಲು ಸಿಎಂ ತಂತ್ರ ?

karnataka-cm-siddaramaiahಸಂಪುಟ ಪುನಾರಚನೆಯಾದ ಬಳಿಕ ಸಚಿವ ಸ್ಥಾನ ಕಳೆದುಕೊಂಡವರು ಹಾಗೂ ಸ್ಥಾನ ವಂಚಿತ ಶಾಸಕರ ಅಸಮಾಧಾನ ಭುಗಿಲೆದ್ದಿರುವ ಹಿನ್ನಲೆಯಲ್ಲಿ ಅವರುಗಳ ಮನವೊಲಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಅವರ ತಂತ್ರಕ್ಕೆ ಪ್ರತಿತಂತ್ರ ರೂಪಿಸಲು ಸಜ್ಜಾಗಿದ್ದಾರೆನ್ನಲಾಗಿದೆ.

ಮಾಜಿ ಸಚಿವ ಅಂಬರೀಷ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಬೆನ್ನಲ್ಲೇ ಇನ್ನೂ ಹಲವು ಶಾಸಕರು ಇದೇ ಹಾದಿ ಹಿಡಿಯುವ ಸಾಧ್ಯತೆಯ ಕಾರಣ, ರಾಜ್ಯ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದ ಪಕ್ಷೇತರ ಶಾಸಕರ ಜೊತೆ ಮುಖ್ಯಮಂತ್ರಿಗಳ ಆಪ್ತ ಸಚಿವರೊಬ್ಬರು ಸಂಪರ್ಕದಲ್ಲಿದ್ದಾರೆಂದು ಹೇಳಲಾಗಿದೆ.

ಒಂದು ವೇಳೆ ಕೆಲ ಶಾಸಕರು ರಾಜೀನಾಮೆ ನೀಡುವ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಪಕ್ಷದಲ್ಲಿ, ಪಕ್ಷೇತರ ಶಾಸಕರ ಬೆಂಬಲ ಗಳಿಸುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಲೆಕ್ಕಾಚಾರವಾಗಿದೆ ಎನ್ನಲಾಗಿದೆ. ತಮ್ಮ ಆಪ್ತ ಸಚಿವರೊಬ್ಬರಿಗೆ ಪಕ್ಷೇತರ ಶಾಸಕರೊಂದಿಗೆ ಸಂಪರ್ಕದಲ್ಲಿರಲು ಸೂಚಿಸಿರುವ ಮುಖ್ಯಮಂತ್ರಿಗಳು, ಅಗತ್ಯ ಬಿದ್ದರೆ ಅವರ ಬೆಂಬಲ ಪಡೆಯುವ ಚಿಂತನೆಯಲ್ಲಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...