alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿ.ಎಂ. ಸಿದ್ಧರಾಮಯ್ಯ ರಣಕಹಳೆ

ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರೆಸಾರ್ಟ್ ನಲ್ಲಿ 2 ದಿನಗಳ ವಿಶ್ರಾಂತಿ ಬಳಿಕ, ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದಿನಿಂದ ಮತ್ತೆ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ.

ತಾವು ಸ್ಪರ್ಧಿಸಲಿರುವ ಚಾಮುಂಡೇಶ್ವರಿ ಮತ್ತು ಪುತ್ರ ಸ್ಪರ್ಧಿಸಲಿರುವ ವರುಣಾ ಕ್ಷೇತ್ರದ ಮುಖಂಡರೊಂದಿಗೆ ರೆಸಾರ್ಟ್ ನಲ್ಲಿ ಸರಣಿ ಸಭೆಗಳನ್ನು ನಡೆಸಿದ್ದ ಸಿ.ಎಂ., ಚುನಾವಣೆಯಲ್ಲಿ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದಾರೆ. ವರುಣಾ ಕ್ಷೇತ್ರದಲ್ಲಿ ಪುತ್ರನ ಗೆಲುವಿಗೆ ಶ್ರಮಿಸುವಂತೆ ಮುಖಂಡರಿಗೆ ಮನವಿ ಮಾಡಿದ್ದಾರೆ.

ಇಂದು 22 ಹಳ್ಳಿಗಳಲ್ಲಿ ರಾತ್ರಿ 8.30 ರ ವರೆಗೂ ನಿರಂತರವಾಗಿ ಸಿ.ಎಂ. ಹಳ್ಳಿಗಳಲ್ಲಿ ಸುತ್ತಾಡಿ ಬಿರುಸಿನ ಪ್ರಚಾರ ನಡೆಸಲಿದ್ದಾರೆ.

ಸಿ.ಎಂ. ತವರು ಮೈಸೂರಿನಲ್ಲಿ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ 2 ದಿನಗಳ ಪ್ರವಾಸ ನಡೆಸಿದ್ದು, ಇದರ ಬೆನ್ನಲ್ಲೇ ಸಿ.ಎಂ. ಮತ್ತೆ ಪ್ರಚಾರ ಆರಂಭಿಸಿದ್ದಾರೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಲಾಗಿದ್ದು, ಪಕ್ಷದ ವರಿಷ್ಠರಿಗೆ ಕಳುಹಿಸಲಾಗ್ತಿದೆ. ದೆಹಲಿಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...