alex Certify
ಕನ್ನಡ ದುನಿಯಾ       Mobile App
       

Kannada Duniya

ಟಿಪ್ಪುಸುಲ್ತಾನ್ ಜಯಂತಿ: ಭದ್ರತಾ ಸಭೆ ನಡೆಸಿದ ಸಿ.ಎಂ.

sid-cm

ಬೆಂಗಳೂರು: ಬಿ.ಜೆ.ಪಿ.ಯ ತೀವ್ರ ವಿರೋಧದ ನಡುವೆಯೂ, ರಾಜ್ಯ ಸರ್ಕಾರ ನವೆಂಬರ್ 10 ರಂದು ರಾಜ್ಯದಲ್ಲಿ ಟಿಪ್ಪುಸುಲ್ತಾನ್ ಜಯಂತಿ ಆಚರಣೆಗೆ ಮುಂದಾಗಿದೆ.

ನವೆಂಬರ್ 7 ರಂದು ಪ್ರಗತಿಪರ ಸಂಘಟನೆಗಳಿಂದ ಟಿಪ್ಪುಸುಲ್ತಾನ್ ಜಯಂತಿ ಆಚರಣೆ ಪರವಾಗಿ ಹೋರಾಟ ನಡೆಸಲಾಗುವುದು. ಟಿಪ್ಪುಸುಲ್ತಾನ್ ಜಯಂತಿಯನ್ನು ವಿರೋಧಿಸಿ ನವೆಂಬರ್ 8 ರಂದು ಬಿ.ಜೆ.ಪಿ. ಪ್ರತಿಭಟನೆ ಹಮ್ಮಿಕೊಂಡಿದೆ. ಕಳೆದ ಬಾರಿ ಟಿಪ್ಪುಸುಲ್ತಾನ್ ಜಯಂತಿ ಆಚರಣೆ ವೇಳೆಯಲ್ಲಿ ಮಡಿಕೇರಿಯಲ್ಲಿ ಹಿಂಸಾಚಾರ ನಡೆದಿತ್ತು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ.

ಮುಖ್ಯಮಂತ್ರಿ ಗೃಹಕಚೇರಿ ‘ಕೃಷ್ಣಾ’ದಲ್ಲಿ ನಡೆದ ಸಭೆಯಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್, ಡಿ.ಜಿ., ಐ.ಜಿ.ಪಿ. ಓಂ ಪ್ರಕಾಶ್ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಪಾಲ್ಗೊಡಿದ್ದರು.

ಸಭೆಯಲ್ಲಿ ಮಾತನಾಡಿದ ಸಿದ್ಧರಾಮಯ್ಯ, ಟಿಪ್ಪುಸುಲ್ತಾನ್ ಜಯಂತಿಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಕೆಲವರು ಮುಂದಾಗಿದ್ದು, ಶಾಂತಿ ಕದಡುವ ಸಾಧ್ಯತೆ ಇರುತ್ತದೆ. ಇದಕ್ಕೆಲ್ಲಾ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಮಾಜಘಾತುಕ ಶಕ್ತಿಗಳನ್ನು ಮುಂಜಾಗ್ರತೆ ಕ್ರಮವಾಗಿ ಬಂಧಿಸಬೇಕು. ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾವಹಿಸಬೇಕೆಂದು ಸೂಚಿಸಿದ್ದು, 2 ಜಿಲ್ಲೆಗಳಿಗೆ ಒಬ್ಬರಂತೆ ಉಸ್ತುವಾರಿ ಅಧಿಕಾರಿಗಳನ್ನು ನೇಮಕ ಮಾಡುವಂತೆ ತಿಳಿಸಿದ್ದಾರೆ.

ಇದರೊಂದಿಗೆ ಕೇಂದ್ರದಿಂದ 10 ತುಕಡಿಗಳನ್ನು ಕಳುಹಿಸಲು ಮನವಿ ಮಾಡಲಾಗಿದೆ. ಸ್ಥಳೀಯ ಮಟ್ಟದಲ್ಲಿ ಶಾಂತಿ ಸಭೆಗಳನ್ನು ನಡೆಸುವಂತೆ ತಿಳಿಸಲಾಗಿದೆ. ಹೀಗೆ ಟಿಪ್ಪುಸುಲ್ತಾನ್ ಜಯಂತಿ ಶಾಂತಿಯುತವಾಗಿ ನಡೆಯಲು ಕೈಗೊಳ್ಳಬೇಕಿರುವ ಭದ್ರತಾ ಕ್ರಮಗಳ ಬಗ್ಗೆ ಸಿ.ಎಂ. ಮಾಹಿತಿ ಪಡೆದುಕೊಂಡು ಕೆಲವು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಭದ್ರತೆ ಬಗ್ಗೆ ಸಭೆ ನಡೆಸಿ ಸೂಚನೆ ನೀಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಟಿಪ್ಪುಸುಲ್ತಾನ್ ಜಯಂತಿ ಮೆರವಣಿಗೆ ನಡೆಸಬೇಕೆ ಬೇಡವೇ ಎಂಬುದರ ಬಗ್ಗೆ ಆಯಾ ಪ್ರದೇಶದ ಸೂಕ್ಷ್ಮತೆ ಆಧರಿಸಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...