alex Certify
ಕನ್ನಡ ದುನಿಯಾ       Mobile App
       

Kannada Duniya

ಪತನಗೊಳ್ಳುವ ಭೀತಿಯಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಮ್ಮಿಶ್ರ ಸರ್ಕಾರ 100 ದಿನ ಪೂರೈಸಿರುವ ಬೆನ್ನಲ್ಲೇ ಇದೀಗ ಕೆಲ ಸಚಿವರು ಹಾಗೂ ಶಾಸಕರ ಬಂಡಾಯದ ಕಾರಣಕ್ಕೆ ಪತನಗೊಳ್ಳುವ ಭೀತಿ ಎದುರಿಸುತ್ತಿದೆ ಎನ್ನಲಾಗಿದೆ.

ಕುಮಾರಸ್ವಾಮಿಯವರ ಸರ್ಕಾರದ ಇಬ್ಬರು ಸಚಿವರು ಹಾಗೂ 20 ಕ್ಕೂ ಅಧಿಕ ಶಾಸಕರುಗಳಿಗೆ ಬಿಜೆಪಿ ಗಾಳ ಹಾಕಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಗೌರಿ-ಗಣೇಶ ಹಬ್ಬದ ಬಳಿಕ ಇವರುಗಳು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ.

ಸಮ್ಮಿಶ್ರ ಸರ್ಕಾರದ ಪ್ರಭಾವಿ ಸಚಿವರೊಬ್ಬರ ಸಂಪರ್ಕದಲ್ಲಿರುವ ಬಿಜೆಪಿ ನಾಯಕರು, ಅವರ ಮೂಲಕವೇ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆಸಿದ್ದು, ಇದಕ್ಕೆ ಬಹುತೇಕ ಯಶಸ್ಸು ಲಭಿಸಿದೆ ಎನ್ನಲಾಗಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರವನ್ನು ಸುಸೂತ್ರವಾಗಿ ನಡೆಸಿಕೊಂಡು ಹೋಗಲು ರಚನೆಯಾಗಿರುವ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರ ಬೆಂಬಲಿಗ ಶಾಸಕರುಗಳ ಹೆಸರು ರಾಜೀನಾಮೆ ನೀಡುವವರ ಪಟ್ಟಿಯಲ್ಲಿ ಕೇಳಿಬರುತ್ತಿರುವುದು ಗಮನಾರ್ಹ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...