alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮಯ್ಯ ಮನವೊಲಿಕೆಗೆ ಮೈತ್ರಿ ಸರ್ಕಾರದ ‘ಸರ್ಕಸ್’

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಚೊಚ್ಚಲ ಬಜೆಟ್ ಜುಲೈ 5 ರಂದು ಮಂಡನೆಯಾಗಲಿದೆ. ಇದಕ್ಕಾಗಿ ಸಿದ್ಧತೆಗಳು ನಡೆದಿರುವಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಬಲಿಗ ಶಾಸಕರ ಮುಂದೆ ತಮ್ಮ ಅಸಮಾಧಾನ ಹೊರಹಾಕಿರುವುದು ತಲೆನೋವಾಗಿ ಪರಿಣಮಿಸಿದೆ.

ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯನವರು ಅಲ್ಲಿಯೇ ಬೆಂಬಲಿಗ ಶಾಸಕರ ಸಭೆ ನಡೆಸಿದ್ದು, ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಕಾರ್ಯವೈಖರಿ ಕುರಿತು ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಈ ಮಾತುಕತೆಯ ವಿಡಿಯೋ ಮಾಧ್ಯಮಗಳಲ್ಲಿ ಬಹಿರಂಗವಾಗುತ್ತಿದ್ದಂತೆಯೇ ಸಿದ್ದರಾಮಯ್ಯನವರ ಮನವೊಲಿಕೆ ಕಾರ್ಯ ಆರಂಭವಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿದ್ದ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ದೇವರ ದರ್ಶನ ಪಡೆದ ನಂತರ ಪೃಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ.

ಆದರೆ ಉಭಯ ನಾಯಕರ ನಡುವಿನ ಮಾತುಕತೆ ಫಲಪ್ರದವಾಗಿಲ್ಲ ಎನ್ನಲಾಗಿದ್ದು, ಪರಮೇಶ್ವರ್ ಮುಂದೆಯೂ ಸಿದ್ದರಾಮಯ್ಯ ಏಕಪಕ್ಷಿಯ ನಿರ್ಧಾರ ಕೈಗೊಳ್ಳುತ್ತಿರುವ ಕುಮಾರಸ್ವಾಮಿಯವರ ನಡೆಗೆ ಆಕ್ಷೇಪಿಸಿದ್ದಾರೆನ್ನಲಾಗಿದೆ.

ಇವರ ಮಧ್ಯೆ, ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯನವರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಲು ಮೈತ್ರಿ ಕೂಟ ಸರ್ಕಾರ ತೀರ್ಮಾನಿಸಿದ್ದು, ಈ ಕುರಿತ ಆದೇಶ ಇಂದು ಸಂಜೆ ಹೊರಬೀಳುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...