alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

siddaramaiah m6

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹದಳ ರಚನೆಯಾದ ಸಂದರ್ಭದಲ್ಲಿ ಮೊದಲ ದೂರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧವೇ ದಾಖಲಾಗಿತ್ತು. ಈಗ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿ ಕುರಿತಂತೆ ಸಿಎಂ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

ಮಂಡಳಿಗೆ ಲಕ್ಷ್ಮಣ್ ಅವರನ್ನು ಅಧ್ಯಕ್ಷರಾಗಿ ನೇಮಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನಿಯಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮಾಹಿತಿ ಹಕ್ಕು ಕಾರ್ಯಕರ್ತ ಟಿ.ನರಸಿಂಹಮೂರ್ತಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಅರಣ್ಯ ಸಚಿವ ರಮಾನಾಥ ರೈ, ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ ಜಾಧವ್, ಅರಣ್ಯ ಇಲಾಖೆ ಹಿಂದಿನ ಪ್ರಧಾನ ಕಾರ್ಯದರ್ಶಿ ಮದನ್ ಗೋಪಾಲ್ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗುವವರಿಗೆ, ಪರಿಸರ ಸಂರಕ್ಷಣೆ ಬಗ್ಗೆ ವಿಶೇಷ ಜ್ಞಾನ ಇರಬೇಕಿದೆ. ಆದರೆ, ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಲಕ್ಷ್ಮಣ್ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ನಿಯಮ ಉಲ್ಲಂಘಿಸಲಾಗಿದೆ ಎಂದು ದೂರಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...