alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ತವರಲ್ಲೇ ‘ಕಾಂಗ್ರೆಸ್’ ಗೆ ತೀವ್ರ ಮುಖಭಂಗ…!

ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಯ್ಕೆಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದ್ದು, ಜೆಡಿಎಸ್-ಬಿಜೆಪಿ ಸದಸ್ಯರ ಬೆಂಬಲದಿಂದಾಗಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಭಾಗ್ಯವತಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಮೇಯರ್ ಆಯ್ಕೆಗಾಗಿ ಇಂದು ಬೆಳಿಗ್ಗೆ ಚುನಾವಣಾಧಿಕಾರಿ ಶಿವಯೋಗಿ ಬಿ. ಕಳಸದ್ ಪ್ರಕ್ರಿಯೆ ಆರಂಭಿಸುತ್ತಿದ್ದಂತೆಯೇ ಸಭೆ ಗೊಂದಲದ ಗೂಡಾಗಿ ಮಾರ್ಪಟ್ಟಿದ್ದು, ಕೋರಂ ಕೊರತೆ ಕಾರಣ ಸಭೆಯನ್ನು ಮುಂದೂಡುವಂತೆ ಕಾಂಗ್ರೆಸ್ ನವರು ಪಟ್ಟು ಹಿಡಿದರು.

ಆದರೆ ಕಾಂಗ್ರೆಸ್ ಬೇಡಿಕೆಯನ್ನು ತಳ್ಳಿ ಹಾಕಿದ ಚುನಾವಣಾಧಿಕಾರಿ ಶಿವಯೋಗಿ ಬಿ. ಕಳಸದ್, ಅಗತ್ಯ ಕೋರಂ ಇದೆ ಎಂದರಲ್ಲದೇ ಚುನಾವಣಾ ಪ್ರಕ್ರಿಯೆಯನ್ನು ಮುಂದುವರೆಸಿದರು. ಅಂತಿಮವಾಗಿ ಮೇಯರ್ ಆಗಿ ಭಾಗ್ಯವತಿ ಆಯ್ಕೆಯಾಗಿದ್ದು, ಅಧಿಕೃತವಾಗಿ ಭಾಗ್ಯವತಿಯವರ ಆಯ್ಕೆಯನ್ನು ಪ್ರಕಟಿಸಬೇಕಾಗಿದೆ. ಸಿಎಂ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಹಿನ್ನಡೆ ಅನುಭವಿಸುವಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...