alex Certify BIG NEWS: ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಬಾದಾಮಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಸ್ಪರ್ಧೆ ಕುರಿತಾಗಿ ಮಾಜಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ಧರಾಮಯ್ಯ, ಮುಂದಿನ ಚುನಾವಣೆಯಲ್ಲಿ ಹೈಕಮಾಂಡ್ ಸೂಚಿಸಿದ ಕಡೆ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋಲಾರ, ಕೊಪ್ಪಳ, ಚಾಮರಾಜಪೇಟೆ, ಚಿಕ್ಕನಾಯಕನಹಳ್ಳಿ, ಅರಕಲಗೂಡು, ಹುಣಸೂರು ಕ್ಷೇತ್ರದವರು ನನ್ನನ್ನು ಕರೆಯುತ್ತಿದ್ದಾರೆ. ಆದರೆ, ಎಲ್ಲಾ ಕಡೆ ಸ್ಪರ್ಧಿಸಲು ಆಗುವುದಿಲ್ಲ. ಚಾಮರಾಜಪೇಟೆ ಬಗ್ಗೆ ನನಗೆ ಒಲವೂ ಇಲ್ಲ, ವಿರೋಧವೂ ಇಲ್ಲ. ಹೈಕಮಾಂಡ್ ಸೂಚನೆ ನೀಡಿದ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ. ಅವರು ಎಲ್ಲಿ ನಿಲ್ಲು ಎನ್ನುತ್ತಾರೋ ಅಲ್ಲಿ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...