alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮಯ್ಯನವರ ಈ ನಿರ್ಧಾರದಿಂದ ಕಾಂಗ್ರೆಸ್ ಹೈಕಮಾಂಡ್ ಗೆ ‘ಶಾಕ್’

ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿರುವಾಗಲೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈಗೊಂಡಿರುವ ನಿರ್ಧಾರದಿಂದಾಗಿ ಆಘಾತಕ್ಕೊಳಗಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಬೇಕೆಂಬ ಕಾರಣಕ್ಕಾಗಿ ಪ್ರಭಾವಿ ಮುಖಂಡರಾಗಿರುವ ಸಿದ್ದರಾಮಯ್ಯನವರನ್ನು ಮೈಸೂರು ಕ್ಷೇತ್ರದಿಂದ ಕಣಕ್ಕಿಳಿಸಬೇಕೆಂದು ಬಯಸಿದ್ದ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ, ತಾವು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಸಿದ್ದರಾಮಯ್ಯನವರು ಹೇಳಿರುವುದು ಬಿಸಿ ತುಪ್ಪವಾಗಿ ಪರಿಣಮಿಸಿದೆ ಎನ್ನಲಾಗಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮುಂದಿನ ದಿನಗಳಲ್ಲಿ ತಾವು ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿ ಸಿದ್ದರಾಮಯ್ಯನವರು ಹೇಳಿದ್ದರು. ಈಗಲೂ ಇದೇ ಮಾತಿಗೆ ಬದ್ಧವಾಗಿರುವ ಕಾರಣ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮನಸ್ಸು ಮಾಡುತ್ತಿಲ್ಲವೆನ್ನಲಾಗಿದೆ.

ಜೊತೆಗೆ ಈ ಹಿಂದೆ ಎರಡು ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿರುವುದು ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲನ್ನಪ್ಪಿದರೂ ಬಾದಾಮಿ ಜನತೆ ಕೈ ಹಿಡಿದಿರುವುದರಿಂದ ಆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಬೇಕೆಂಬ ಕಾರಣಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯನವರು ಹಿಂದೇಟು ಹಾಕುತ್ತಿದ್ದಾರೆನ್ನಲಾಗಿದ್ದು, ಚುನಾವಣಾ ಸಂದರ್ಭದಲ್ಲಿ ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...