alex Certify
ಕನ್ನಡ ದುನಿಯಾ       Mobile App
       

Kannada Duniya

ಅತೃಪ್ತ ಶಾಸಕರ ಸಂಪರ್ಕದಲ್ಲಿದ್ದಾರಂತೆ ಸಿದ್ದರಾಮಯ್ಯ

ಮೈತ್ರಿಕೂಟ ಸರ್ಕಾರದಲ್ಲಿ ನೂತನ ಸಚಿವರ ಪ್ರಮಾಣವಚನದ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಇಂತಹ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮಗೂ ಇದಕ್ಕೂ ಸಂಬಂಧವೇ ಇಲ್ಲವೇನೋ ಎಂಬಂತೆ ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ ಎಂಬ ಟೀಕೆಗಳು ಸ್ವಪಕ್ಷೀಯರಿಂದಲೇ ಕೇಳಿ ಬಂದಿತ್ತು.

ಈ ಕುರಿತು ಇಂದು ಬಾಗಲಕೋಟೆ ಜಿಲ್ಲೆ ಬಾದಾಮಿ ವಿಧಾನಸಭಾ ಕ್ಷೇತ್ರದ ನೀಲಗುಂದದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ, ತಾವು ಅತೃಪ್ತ ಶಾಸಕರೊಂದಿಗೆ ಸಂಪರ್ಕದಲ್ಲಿದ್ದು, ಅವರುಗಳನ್ನು ಸಮಾಧಾನಪಡಿಸಿದ್ದೇನೆ. ಆದರೆ ಯಾವುದೇ ಭರವಸೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಶಾಸಕರಲ್ಲಿ ಯಾವುದೇ ಅಸಮಾಧಾನ ಅಥವಾ ಅತೃಪ್ತಿ ಇಲ್ಲ. ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೂ ಯಾವುದೇ ತೊಂದರೆ ಇಲ್ಲ. ತಾವು ಪಕ್ಷದ ಹೈಕಮಾಂಡ್ ಜೊತೆಗೂ ಮಾತನಾಡಿದ್ದು, ಈಗ ಎಲ್ಲ ಸಮಸ್ಯೆ ಬಗೆಹರಿದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...