alex Certify
ಕನ್ನಡ ದುನಿಯಾ       Mobile App
       

Kannada Duniya

ತವರು ಜಿಲ್ಲೆಯಲ್ಲಿ ಹಿಡಿತ ಸಾಧಿಸಲು ಸಿದ್ದರಾಮಯ್ಯ ಹಾಕಿದ್ದಾರೆ ಈ ಪಟ್ಟು…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತವರು ಜಿಲ್ಲೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರವಲ್ಲದೆ ಬಾದಾಮಿ ವಿಧಾನಸಭಾ ಕ್ಷೇತ್ರದಿಂದಲೂ ಕಣಕ್ಕಿಳಿದಿದ್ದರು.

ಆದರೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಪರಾಭವಗೊಂಡಿದ್ದು ಬಾದಾಮಿ ಮತ ಕ್ಷೇತ್ರದ ಜನತೆ ಅವರ ಕೈ ಹಿಡಿದಿದ್ದರು. ಆದರೆ ತಮ್ಮ ತವರು ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್ ಪ್ರಾಬಲ್ಯ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ತಡೆಯೊಡ್ಡಲು ಮುಂದಾಗಿರುವ ಸಿದ್ದರಾಮಯ್ಯನವರು ಹೈಕಮಾಂಡ್ ಮುಂದೆ ಬೇಡಿಕೆಯೊಂದನ್ನು ಮಂಡಿಸಿದ್ದಾರೆನ್ನಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಏರ್ಪಟ್ಟರೆ ಯಾವುದೇ ಕಾರಣಕ್ಕೂ ಮೈಸೂರು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಬಾರದೆಂದು ಸಿದ್ದರಾಮಯ್ಯನವರು ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದು, ಇದಕ್ಕೆ ಹೈಕಮಾಂಡ್ ಯಾವ ರೀತಿ ಸ್ಪಂದಿಸುತ್ತದೆಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...