alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲು ಮುಂದಾದ ಸಿ.ಎಂ.

ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ‘ಸೀದಾರುಪಯ್ಯ’ ಎಂದು ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಮುಂದಾಗಿದ್ದಾರೆ.

10 ಪರ್ಸೆಂಟ್ ಸರ್ಕಾರ ಎಂದು ಟೀಕಿಸಿದ್ದ ಮೋದಿ, ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಲೀಗಲ್ ನೋಟಿಸ್ ಕಳಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ವಿಧಾನ ಪರಿಷತ್ ಸದಸ್ಯ ಉಗ್ರಪ್ಪ, ಮುಖ್ಯಮಂತ್ರಿಯವರಿಗೆ ಮಾನಹಾನಿಯಾಗಿದೆ ಎಂದು 100 ಕೋಟಿ ರೂ. ಪರಿಹಾರ ಕೋರಿ ಲೀಗಲ್ ನೋಟಿಸ್ ನೀಡಲಾಗಿದೆ. ಪ್ರಧಾನಮಂತ್ರಿಯಂತಹ ಉನ್ನತ ಹುದ್ದೆಯಲ್ಲಿರುವ ಮೋದಿಯವರು ಕೀಳುಮಟ್ಟದ ಪದ ಬಳಕೆ ಮಾಡಿ ಸಿದ್ಧರಾಮಯ್ಯ ಅವರ ತೇಜೋವಧೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಅವರು ಕ್ಷಮೆ ಕೇಳಬೇಕು. ನೋಟಿಸ್ ಗೆ ಉತ್ತರ ನೀಡಬೇಕು. ಇಲ್ಲವಾದಲ್ಲಿ ಕೇಸ್ ದಾಖಲಿಸಲಾಗುವುದು ಎಂದು ಉಗ್ರಪ್ಪ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...