alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮಯ್ಯನವರಿಂದ ಕಾಂಗ್ರೆಸ್ ಸಚಿವರಿಗೆ ಔತಣಕೂಟ

ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಸಂಜೆ ಕಾಂಗ್ರೆಸ್ ಪಕ್ಷದ ಸಚಿವರುಗಳಿಗೆ ಔತಣಕೂಟ ಏರ್ಪಡಿಸಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರ ನೇಮಕಾತಿ  ಬಗ್ಗೆ ಅಸಮಾಧಾನಗೊಂಡಿರುವ  ಸಿದ್ದರಾಮಯ್ಯ, ಸಚಿವರುಗಳ ಜೊತೆ ಹಲವು ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಕೂಡ ಈ ಔತಣಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಸ್ಥಾಪನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಮಾತಿನಿಂದ ಉದ್ಬವಿಸಿರುವ ಬಿಕ್ಕಟ್ಟಿನ ಕುರಿತು ಈ ಸಂದರ್ಭದಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...