alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಸಿದ್ಧರಾಮಯ್ಯಗೆ ಸಿಗುತ್ತಾ ಚಾನ್ಸ್ …?

ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಸಿ.ಎಂ. ಸಿದ್ಧರಾಮಯ್ಯ ಬಾದಾಮಿಯಿಂದಲೂ ಸ್ಪರ್ಧಿಸಲು ಮುಂದಾಗಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರ ಸೇಫಲ್ಲ ಎನ್ನುವ ಕಾರಣಕ್ಕೆ ಅವರು ಬಾದಾಮಿ ಕ್ಷೇತ್ರದಿಂದಲೂ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಈಗಾಗಲೇ ಬಾದಾಮಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದರೂ, ಬಿ ಫಾರಂ ನೀಡಿಲ್ಲ. ಸಿ.ಎಂ. ಸ್ಪರ್ಧಿಸಿದರೆ ಸ್ಪರ್ಧಿಸಲಿ, ಇಲ್ಲವೇ ತಮಗೇ ಟಿಕೆಟ್ ಕೊಡಬೇಕೆಂದು ಚಿಮ್ಮನಕಟ್ಟಿ ಅವರು ಪಟ್ಟು ಹಿಡಿದಿದ್ದಾರೆ.

ಸಚಿವ ಎಂ.ಬಿ. ಪಾಟೀಲ್ ಸೇರಿದಂತೆ ಹಲವು ನಾಯಕರು ಬಾದಾಮಿಯಿಂದ ಸ್ಪರ್ಧಿಸಲು ಸಿ.ಎಂ.ಗೆ ಅವಕಾಶ ನೀಡಬೇಕೆಂದು ಒತ್ತಡ ಹೇರಿದ್ದು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ದೆಹಲಿಗೆ ತೆರಳಿ ಹೈಕಮಾಂಡ್ ನೊಂದಿಗೆ ಚರ್ಚಿಸಲಿದ್ದಾರೆ.

ಇದೇ ವೇಳೆ ಸಿ.ಎಂ. 2 ಕ್ಷೇತ್ರದಲ್ಲಿ ಸ್ಪರ್ಧೆ ಹಾಗೂ ಜಗಳೂರು, ಮಡಿಕೇರಿ, ಶಾಂತಿನಗರ ಸೇರಿ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...