alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರಜೋಳರನ್ನು ಸಿ.ಎಂ. ಮಾಡಿ: ಮೋದಿಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿ.ಎಂ. ಸ್ಥಾನ ತಪ್ಪಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯಲ್ಲಿ ಆರೋಪಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ಹರಿಜನರ ಮೇಲೆ ಪ್ರೀತಿ ಇದ್ದರೆ, ಬಿ.ಜೆ.ಪಿ. ನಾಯಕ ಕಾರಜೋಳ ಅವರನ್ನು ಮುಖ್ಯಮಂತ್ರಿಯಾಗಿ ಮಾಡಲಿ ಎಂದು ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿಯಲ್ಲಿ ಸಿದ್ಧರಾಮಯ್ಯ ಹೇಳಿದ್ದಾರೆ.

ಖರ್ಗೆಯವರಿಗೆ ಸಿ.ಎಂ. ಸ್ಥಾನ ಸಿಕ್ಕಿಲ್ಲ. ರಾಷ್ಟ್ರಮಟ್ಟದಲ್ಲಿ ವಿಪಕ್ಷ ನಾಯಕನ ಸ್ಥಾನ ಸಿಕ್ಕಿದೆ. ಬಿ.ಜೆ.ಪಿ.ಗೆ ಹರಿಜನರ ಮೇಲೆ ಪ್ರೀತಿ ಇದ್ದಲ್ಲಿ ಕಾರಜೋಳರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಿ ಎಂದು ಹೇಳಿದ್ದಾರೆ. ಸೀದಾರೂಪಯ್ಯ ಎಂದು ಬೇಸ್ ಲೆಸ್ ಅಲಿಗೇಷನ್ ಮಾಡಿದ್ದಾರೆ. ಪ್ರಧಾನಿಯಾಗಿ ಬೇಜವಾಬ್ದಾರಿಯಿಂದ ಮಾತನಾಡಬಾರದು ಎಂದಿದ್ದಾರೆ.

ಯಡಿಯೂರಪ್ಪ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲವನ್ನು ಮನ್ನಾ ಮಾಡುವುದಾಗಿ ಹೇಳಿದ್ದಾರೆ. ಅವರು ಅಧಿಕಾರ ಇದ್ದ ಸಂದರ್ಭದಲ್ಲಿ ಏಕೆ ಸಾಲ ಮನ್ನಾ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಬಿ.ಜೆ.ಪಿ. ಅಧಿಕಾರಕ್ಕೆ ಬರಲ್ಲ, ಬಂದ್ರೆ ಕಾರಜೋಳರನ್ನು ಸಿ.ಎಂ. ಮಾಡುವುದಾಗಿ ಹೇಳಲಿ. ಹರಿಜನರ ಮೇಲೆ ಪ್ರೀತಿ ಇದ್ದರೆ, ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಿ ಎಂದು ಸಿ.ಎಂ. ಸಿದ್ಧರಾಮಯ್ಯ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...