alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವುದರ ಹಿಂದಿನ ‘ರಹಸ್ಯ’ ಬಿಚ್ಚಿಟ್ಟ ಸಿದ್ದರಾಮಯ್ಯ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕ್ಷೇತ್ರ ಬದಲಿಸುತ್ತಿದ್ದಾರೆಂಬ ವದಂತಿಗೆ ಸ್ವತಃ ಸಿದ್ದರಾಮಯ್ಯನವರೇ ಅಂತ್ಯ ಹಾಡಿದ್ದು, ಚಾಮುಂಡೇಶ್ವರಿ ಕ್ಷೇತ್ರದಿಂದಲೇ ತಾವು ಈ ಬಾರಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ.

ಮೈಸೂರಿನಲ್ಲಿಂದು ಒಕ್ಕಲಿಗ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉತ್ತರ ಕರ್ನಾಟಕದ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ತಮಗೆ ಆಹ್ವಾನ ಬರುತ್ತಿರುವುದು ನಿಜ. ಆದರೆ ಚಾಮುಂಡೇಶ್ವರಿ, ತಮಗೆ ರಾಜಕೀಯವಾಗಿ ಮರು ಜನ್ಮ ನೀಡಿದ ಕ್ಷೇತ್ರವಾಗಿದ್ದು, ಇದು ತಮ್ಮ ಕಡೆ ಚುನಾವಣೆಯಾಗಿರುವ ಕಾರಣ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತಿರುವುದಾಗಿ ತಿಳಿಸಿದ್ದಾರೆ.

ತಾವು ಮೊದಲ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದಾಗ ಠೇವಣಿ ಕಟ್ಟಲೂ ತಮ್ಮ ಬಳಿ ಹಣವಿರಲಿಲ್ಲ. ಆಗ ಸ್ನೇಹಿತರೊಬ್ಬರಿಂದ ಸಾಲ ಪಡೆದು ಠೇವಣಿ ಕಟ್ಟಿದ್ದೆ. ಬಳಿಕ ನಾಮಪತ್ರ ವಾಪಾಸ್ ಪಡೆಯಲು ಸ್ಕೂಟರ್ ನಲ್ಲಿ ಬರುವಾಗ ಸ್ಕೂಟರ್ ಕೆಟ್ಟಿದ್ದರಿಂದ ಕಣದಲ್ಲಿ ಉಳಿಯುವಂತಾಗಿತ್ತು ಎಂದು ಸ್ಮರಿಸಿಕೊಂಡಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದ ಜನತೆ ಜಾತಿ ನೋಡಿ ಮತ ಹಾಕುವುದಿಲ್ಲ. ತಾವು ಕೇವಲ ಒಂದು ದಿನ ಮಾತ್ರ ಪ್ರಚಾರಕ್ಕೆ ಬರಲಿದ್ದು, ಕ್ಷೇತ್ರದ ಜನತೆ ಈ ಬಾರಿಯ ಚುನಾವಣೆಯಲ್ಲೂ ಗೆಲ್ಲಿಸಲಿದ್ದಾರೆಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...