alex Certify
ಕನ್ನಡ ದುನಿಯಾ       Mobile App
       

Kannada Duniya

ಕುಟುಂಬ ಸಮೇತ ಮೊದಲ ಬಾರಿ ವಿದೇಶ ಪ್ರವಾಸಕ್ಕೆ ಸಜ್ಜಾದ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮೀಣ ಸೊಗಡು, ಖಡಕ್ ವರ್ಚಸ್ಸು, ಸರಳ ಜೀವನದಿಂದಲೇ ಜನಪ್ರಿಯರಾದ ಮಾಜಿ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಲು ಸಜ್ಜಾಗಿದ್ದಾರೆ. ಇದಕ್ಕಾಗಿಯೇ 1 ಲಕ್ಷ ರೂ. ಮೊತ್ತದ ಶಾಪಿಂಗ್​ ಕೂಡ ಮಾಡಿದ್ದಾರೆ.

ತಮ್ಮ ಐದು ವರ್ಷದ ಆಡಳಿತಾವದಿಯಲ್ಲಿ ಸಿದ್ದರಾಮಯ್ಯ ವಿದೇಶ ಪ್ರವಾಸ ಕೈಗೊಂಡಿದ್ದು ಒಂದೆರಡು ಬಾರಿ ಮಾತ್ರ. ಸಿಎಂ ಆಗಿದ್ದ ವೇಳೆ ಹಾಗೂ ವಿಧಾನಸಭೆ ಚುನಾವಣಾ ಸಮಯದಲ್ಲಿ ಬಿಡುವಿಲ್ಲದ ಕೆಲಸಗಳಿಂದ ಬ್ಯುಸಿಯಾಗಿದ್ದ ಸಿದ್ದರಾಮಯ್ಯ ಈಗ ಬಿಡುವು ಮಾಡಿಕೊಂಡು ಕುಟುಂಬಕ್ಕೆ ಸಮಯ ನೀಡಲು ಮನಸ್ಸು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ಸಜ್ಜಾಗಿದ್ದಾರೆ.

ಇದೇ ಸೆಪ್ಟೆಂಬರ್ 2 ರಿಂದ 10 ದಿನಗಳ ಯುರೋಪ್ ಪ್ರವಾಸ ಮಾಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ. ಪತ್ನಿ ಪಾರ್ವತಿ, ಪುತ್ರ ಹಾಗೂ ಶಾಸಕ ಯತೀಂದ್ರ ಮತ್ತು ಸೊಸೆ ಸ್ಮಿತಾ ರಾಕೇಶ್ ಹಾಗೂ ಇಬ್ಬರು ಮೊಮ್ಮಕ್ಕಳೊಂದಿಗೆ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಧಿಕಾರ ಸಿಕ್ಕರೆ ಸಾಕು ಆಡಳಿತ ನೆಪ ಹೇಳಿ ವಿದೇಶ ಪ್ರವಾಸಕ್ಕೆ ಅಣಿಯಾಗುವ ನಾಯಕರ ನಡುವೆ ನನಗೆ ಕರುನಾಡೇ ಚಂದ ಎನ್ನುವ ಸಿದ್ದರಾಮಯ್ಯ ನಿಜಕ್ಕೂ ಎಲ್ಲರಿಗೂ ಮಾದರಿ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...