alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಪುಟ ವಿಸ್ತರಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದೇ ಮೇಲುಗೈ

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರಕಾರದ ಸಚಿವ ಸಂಪುಟ ರಚನೆ ಇಂದು ನಡೆಯುತ್ತಿದ್ದು, ಉಭಯ ಪಕ್ಷಗಳ ಸಚಿವರ ಪಟ್ಟಿ ಈಗಾಗಲೇ ಸಿದ್ಧವಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಆಪ್ತರಿಗೆ ಮಂತ್ರಿಸ್ಥಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಹೇಳಲಾಗಿದ್ದು, ಜಮೀರ್ ಅಹಮದ್ ಖಾನ್, ಪುಟ್ಟರಂಗಶೆಟ್ಟಿ, ವೆಂಕಟರಮಣಪ್ಪ, ಶಂಕರ್, ಜಯಮಾಲಾ ಹಾಗೂ ರಾಜಶೇಖರ ಪಾಟೀಲ್ ಈ ಪಟ್ಟಿಯಲ್ಲಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಮುನಿಯಪ್ಪ, ತಮ್ಮ ಪುತ್ರಿಗೆ ಸಚಿವ ಸ್ಥಾನ ಕೊಡಿಸಲು ಕಡೆ ಗಳಿಗೆವರೆಗೂ ಯತ್ನಿಸಿದರೂ ಸಾಧ್ಯವಾಗಲಿಲ್ಲವೆನ್ನಲಾಗಿದೆ. ಇನ್ನು ಕೆಲ ಹೊತ್ತಿನಲ್ಲೇ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಯಾರಾಗಲಿದ್ದಾರೆ ಸಚಿವರು ಎಂಬ ಕುತೂಹಲಕ್ಕೆ ತೆರೆಬೀಳಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...