alex Certify
ಕನ್ನಡ ದುನಿಯಾ       Mobile App
       

Kannada Duniya

ರೈತರ ಸಾಲ ಮನ್ನಾ ಮಾಡಿದ ರಾಜ್ಯ ಸರ್ಕಾರ

siddaramaiah_650ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಮಹತ್ವದ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.

ಸಹಕಾರಿ ಬ್ಯಾಂಕ್ ಗಳಲ್ಲಿ ರೈತರು ಪಡೆದಿರುವ 50 ಸಾವಿರ ರೂ. ವರೆಗಿನ ಸಾಲ ಮನ್ನಾ ಮಾಡಲಾಗುತ್ತಿದ್ದು, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲವನ್ನೂ ಮನ್ನಾ ಮಾಡಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸುವಂತೆ ಬಿಜೆಪಿ ನಾಯಕರನ್ನು ಒತ್ತಾಯಿಸಲಾಗಿದೆ.

ಇತ್ತೀಚೆಗಷ್ಟೇ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಜಾಬ್ ರೈತರ ಸಾಲ ಮನ್ನಾ ಮಾಡಿದ್ದ ಬಳಿಕ ರಾಜ್ಯದಲ್ಲಿಯೂ ರೈತರ ಸಾಲ ಮನ್ನಾ ಮಾಡುವ ಒತ್ತಡಕ್ಕೆ ಸರ್ಕಾರ ಸಿಲುಕಿತ್ತು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಈ ವಿಚಾರ ಪ್ರಕಟಿಸುತ್ತಿದ್ದಂತೆಯೇ ಕಾಂಗ್ರೆಸ್ ಶಾಸಕರು ಮೇಜು ಕುಟ್ಟಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...