alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ರಿಂದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ

siddaramaiah 344566ಬೀದರ್ ಜಿಲ್ಲೆಗೆ ಮಂಗಳವಾರದಂದು ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಳೆಯಿಂದಾಗಿ ಹಾನಿಗೊಳಗಾದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಬೀದರ್ ಏರ್ ಬೇಸ್ ನಿಂದ ಹೆಲಿಕ್ಯಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ಆರಂಭಿಸಿದ ಮುಖ್ಯಮಂತ್ರಿಯವರು, ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಆವರಿಸಿದ ಮಳೆ ನೀರು, ಅದರಿಂದುಂಟಾದ ಹಾನಿಯನ್ನು ವೀಕ್ಷಿಸಿದರು.

ಮಳೆಯಿಂದಾಗಿ ಎರಡ್ಮೂರು ದಿನಗಳಿಂದ ತುಂಬಿ ಹರಿಯುತ್ತಿರುವ ವಿವಿಧ ಸೇತುವೆಗಳ ಸುತ್ತಲಿನ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಕೊಚ್ಚಿಹೋದ ಬೆಳೆ ಹಾಗೂ ಅತಿ ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾದ ಔರಾದ್ ತಾಲೂಕಿನ ಶಂಬೆಳ್ಳಿ ಕೆರೆ, ಭಾಲ್ಕಿ ತಾಲೂಕಿನ ಆನಂದವಾಡಿ, ಕಳಸದಾಳ ಸೇರಿದಂತೆ ವಿವಿಧ ಕೆರೆಗಳ ಪ್ರದೇಶಕ್ಕೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೇಟಿ ನೀಡಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...