alex Certify
ಕನ್ನಡ ದುನಿಯಾ       Mobile App
       

Kannada Duniya

ಮಳೆಗಾಗಿ 20 ಲಕ್ಷ ರೂ ವೆಚ್ಚದಲ್ಲಿ ಹೋಮ..?

homa

ಬೆಂಗಳೂರು: ಬರಗಾಲದಿಂದ ರಾಜ್ಯದಲ್ಲಿ ಸಂಕಷ್ಟದ ಸ್ಥಿತಿಯಿದ್ದು, ಈ ಬಾರಿ ಉತ್ತಮ ಮಳೆಯಾಗಲಿ ಎಂದು ಪ್ರಾರ್ಥಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸೂಚನೆಯಂತೆ 20 ಲಕ್ಷ ರೂ ವೆಚ್ಚದಲ್ಲಿ ಪರ್ಜನ್ಯ ಹೋಮ ನಡೆಸಲಾಗುವುದು ಎನ್ನಲಾಗಿದೆ.

ಕೇರಳದ ಪುರೋಹಿತರ ನೇತೃತ್ವದಲ್ಲಿ ಜೂನ್ 2 ರಂದು ಕೃಷ್ಣಾ ನದಿಯ ಉಗಮ ಸ್ಥಳವಾದ ಮಹಾರಾಷ್ಟ್ರದ ಮಹಾಬಲೇಶ್ವರ ಹಾಗೂ ಜೂನ್ 4 ರಂದು ಕಾವೇರಿ ನದಿಯ ಉಗಮ ಸ್ಥಾನ ಕೊಡಗಿನ ಭಾಗಮಂಡಲದಲ್ಲಿ ವಿಶೇಷ ಪೂಜೆ ನಡೆಸಲಾಗುವುದು.

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇತ್ತೀಚೆಗೆ ಹೆಚ್ಚಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ನಡೆಸುವಂತೆ ಸೂಚನೆ ನೀಡಿದ್ದು, ಅದರಂತೆ ಎರಡೂ ಸ್ಥಳದಲ್ಲಿ ವಿಶೇಷ ಹೋಮ ನಡೆಸಲಾಗುವುದು ಎಂದು ಹೇಳಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...