alex Certify
ಕನ್ನಡ ದುನಿಯಾ       Mobile App
       

Kannada Duniya

ಸದನಕ್ಕೆ ಹಾಜರಾಗದ ಶಾಸಕರ ವಿರುದ್ದ ಸಿಎಂ ಗರಂ

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೆಲ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಸಕ್ರಿಯವಾಗಿ ಪಾಲ್ಗೊಳ್ಳದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆಂದು ಹೇಳಲಾಗಿದೆ.

ಸುವರ್ಣಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ನಮ್ಮ ಸರ್ಕಾರದ ಕೊನೆ ಅಧಿವೇಶನ ಇದಾಗಿದ್ದು, ಸದನದಲ್ಲಿ ಮಂಡಿಸಲಾಗುವ ವಿಧೇಯಕಗಳಿಗೆ ಸದನದಲ್ಲಿ ಹಾಜರಿದ್ದು ಬೆಂಬಲಿಸುವಂತೆ ತಾಕೀತು ಮಾಡಿದರೆನ್ನಲಾಗಿದೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಅಧಿವೇಶನದ ಬಳಿಕ ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಹೆಚ್ಚಿನ ಸಮಯ ವಿನಿಯೋಗಿಸುವಂತೆ ಸೂಚಿಸಿರುವ ಮುಖ್ಯಮಂತ್ರಿಗಳು, ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರೆನ್ನಲಾಗಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್ ಮೊದಲಾದವರು ಪಾಲ್ಗೊಂಡಿದ್ದರು.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...