alex Certify
ಕನ್ನಡ ದುನಿಯಾ       Mobile App
       

Kannada Duniya

ಅಷ್ಟು ಸುಲಭವಲ್ಲ ಸಮ್ಮಿಶ್ರ ಸರ್ಕಾರದ ಪತನ-ಇಲ್ಲಿದೆ ಕಾರಣ…!

ಜಾರಕಿಹೊಳಿ ಸಹೋದರರು, ಬೆಳಗಾವಿ ಪಿ.ಎಲ್.ಡಿ. ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಬಣಕ್ಕೆ ಹಿನ್ನಡೆಯಾಗಿದೆ ಎಂಬ ಕಾರಣಕ್ಕೆ ಪಕ್ಷದ ನಾಯಕತ್ವದ ವಿರುದ್ಧ ತಿರುಗಿಬಿದ್ದಿದ್ದು, ಇದು ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆದರೆ ಪಿ.ಎಲ್.ಡಿ. ಬ್ಯಾಂಕ್ ಚುನಾವಣೆ ನೆಪ ಮಾತ್ರ ಎಂದು ಹೇಳಲಾಗುತ್ತಿದ್ದು, ಇದಕ್ಕೂ ಮುನ್ನವೇ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಬೆಂಬಲಿಗ ಶಾಸಕರೊಂದಿಗೆ ದೆಹಲಿ ಯಾತ್ರೆ ಮಾಡುವುದರ ಜೊತೆಗೆ ಕೆಲ ಬೇಡಿಕೆಗಳನ್ನು ಈಡೇರಿಸುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು.

ಇದೀಗ ಜಾರಕಿಹೊಳಿ ಸಹೋದರರು ಸೆಪ್ಟಂಬರ್ 16 ರ ಗಡುವು ನೀಡಿದ್ದು, ರಾಜಕಾರಣದಲ್ಲಿ ಏನು ಬೇಕಾದರೂ ನಡೆಯಬಹುದು. ಇದಕ್ಕೆ ನಮ್ಮನ್ನು ಹೊಣೆ ಮಾಡಬೇಡಿ ಎಂದು ಹೇಳುವ ಮೂಲಕ ಸಮ್ಮಿಶ್ರ ಸರ್ಕಾರ ಉರುಳಿ ಬೀಳಬಹುದೆಂಬ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಆದರೆ ರಾಜಕೀಯ ಪಂಡಿತರ ಲೆಕ್ಕಾಚಾರದ ಪ್ರಕಾರ, ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವುದು ಅಷ್ಟು ಸುಲಭವಲ್ಲವೆಂದು ಹೇಳಲಾಗುತ್ತಿದೆ. ಕುಮಾರಸ್ವಾಮಿಯವರ ಸರ್ಕಾರ ಅಲ್ಪಮತಕ್ಕೆ ಕುಸಿದು, ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದ್ದ ಬಿಜೆಪಿ ಸರ್ಕಾರ ರಚಿಸಬೇಕೆಂದರೆ ಕನಿಷ್ಠ 14 ಮಂದಿ ಶಾಸಕರುಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಶಾಸಕರುಗಳು ಜಾರಕಿಹೊಳಿ ಸಹೋದರರ ಜೊತೆಗಿದ್ದಾರಾ ಎಂಬ ಪ್ರಶ್ನೆ ಈಗ ಮೂಡಿದೆ.

ಹೀಗಾಗಿಯೇ ಜಾರಕಿಹೊಳಿ ಸಹೋದರರು ಸಚಿವ ಸ್ಥಾನ ಸಿಗದೆ ಪಕ್ಷದ ವಿರುದ್ಧ ಮುನಿಸಿಕೊಂಡಿರುವ ಕೆಲ ಶಾಸಕರುಗಳನ್ನು ಸೆಳೆಯುವ ಮೂಲಕ ತಮ್ಮ ಬಲವನ್ನು ಹೆಚ್ಚಿಸಿಕೊಳ್ಳಲು ಯತ್ನ ನಡೆಸುತ್ತಿದ್ದರಾದರೂ ಇದರಲ್ಲಿ ಎಷ್ಟರಮಟ್ಟಿಗೆ ಯಶಸ್ವಿಯಾಗುತ್ತಾರೆಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...