alex Certify
ಕನ್ನಡ ದುನಿಯಾ       Mobile App
       

Kannada Duniya

ಜಾರಕಿಹೊಳಿ ಸಹೋದರರ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತುಕತೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದೇಶ ಪ್ರವಾಸದಲ್ಲಿರುವ ಸಂದರ್ಭದಲ್ಲೇ ರಾಜ್ಯ ರಾಜಕಾರಣ ಹಲವು ತಿರುವು ಪಡೆಯುತ್ತಿದ್ದು, ಸಿದ್ದರಾಮಯ್ಯನವರ ಕಟ್ಟಾ ಬೆಂಬಲಿಗರೆಂದೇ ಗುರುತಿಸಿಕೊಂಡಿರುವ ಜಾರಕಿಹೊಳಿ ಸಹೋದರರು ಸಮ್ಮಿಶ್ರ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯನವರು ವಿದೇಶದಲ್ಲಿದ್ದರೂ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆಂದು ಹೇಳಲಾಗಿದ್ದು, ಜಾರಕಿಹೊಳಿ ಸಹೋದರರ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆಂದು ತಿಳಿದು ಬಂದಿದೆ.

ತಾವು ವಿದೇಶದಿಂದ ಮರಳಿ ಬರುವವರೆಗೂ ತಾಳ್ಮೆಯಿಂದ ಇರುವಂತೆ ಜಾರಕಿಹೊಳಿ ಸಹೋದರರು ಮತ್ತವರ ಬೆಂಬಲಿಗ ಶಾಸಕರಿಗೆ ಸಲಹೆ ನೀಡಿರುವ ಸಿದ್ದರಾಮಯ್ಯನವರು, ಆ ಬಳಿಕ ಸಭೆ ನಡೆಸಿ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...