alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಕೃತಿ ಚಿಕಿತ್ಸಾಲಯದಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಸಿಡಿಸಿದ್ದಾರೆ ಮತ್ತೊಂದು ಬಾಂಬ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಡುವಿನ ಜಟಾಪಟಿ ತಾರಕಕ್ಕೇರಿರುವ ಮಧ್ಯೆಯೇ ಹೊಸ ಸರ್ಕಾರದ ಆಯುಷ್ಯ ಕುರಿತು ಸಿದ್ದರಾಮಯ್ಯ ಈಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ಧರ್ಮಸ್ಥಳದ ಶಾಂತಿ ವನದಲ್ಲಿರುವ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯನವರು ಆಪ್ತರೊಂದಿಗಿನ ಮಾತುಕತೆ ವೇಳೆ, ಮುಂಬರುವ ಲೋಕಸಭಾ ಚುನಾವಣೆ ಬಳಿಕ ಈ ಸರ್ಕಾರ ಉಳಿಯುವುದು ಕಷ್ಟ ಎಂಬರ್ಥದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆಯವರೆಗೂ ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿರುವ ಸಿದ್ದರಾಮಯ್ಯನವರು, ನಂತರದ ಬೆಳವಣಿಗೆಗಳು ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದಿದ್ದಾರೆ.

ಹೀಗಾಗಿ ರಾಜ್ಯದಲ್ಲಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಐದು ವರ್ಷ ಪೂರೈಸುವುದು ಅನುಮಾನವಾಗಿದೆ. ಇದಕ್ಕೆ ಪೂರಕವೆಂಬಂತೆ ಮಾಜಿ ಹಾಗೂ ಹಾಲಿ ಸಿಎಂಗಳ ನಡುವಿನ ಕದನ ದಿನದಿಂದ ದಿನಕ್ಕೆ ಹೊಸ ರೂಪ ಪಡೆಯುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...