alex Certify
ಕನ್ನಡ ದುನಿಯಾ       Mobile App
       

Kannada Duniya

ಎಲ್ಲಾ ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ 62 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕನ್ನಡಾಭಿಮಾನ ಹೆಚ್ಚಾಗಬೇಕಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ವಾಸಿಸುತ್ತಿರುವವರೆಲ್ಲರೂ ಕನ್ನಡಿಗರಾಗಿದ್ದು, ಎಲ್ಲರೂ ಕನ್ನಡ ಭಾಷೆಯನ್ನು ಕಲಿಯಬೇಕು. ತಮ್ಮ ಮಕ್ಕಳಿಗೂ ಕಲಿಸಬೇಕೆಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದೆ. ರಾಜ್ಯದಲ್ಲಿ ಎಲ್ಲಾ ಶಾಲೆಗಳಲ್ಲಿಯೂ ಕನ್ನಡವನ್ನು ಕಡ್ಡಾಯವಾಗಿ ಕಲಿಸಬೇಕು. ಕೆಲವು ಶಾಲೆಗಳ ಬಗ್ಗೆ ದೂರು ಬಂದಿದ್ದು, ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕನ್ನಡ ಶಾಲೆಗಳನ್ನು ಮುಚ್ಚುವುದಿಲ್ಲ. 2 -5 ಮಕ್ಕಳಿದ್ದರೂ ಕನ್ನಡ ಶಾಲೆಗಳನ್ನು ಮುಚ್ಚುವುದಿಲ್ಲ. ಪೋಷಕರು ಇಂಗ್ಲಿಷ್ ವ್ಯಾಮೋಹ ಬಿಡಬೇಕೆಂದು ತಿಳಿಸಿದ್ದಾರೆ.

ಹರಿದು ಹಂಚಿಹೋಗಿದ್ದ ಕನ್ನಡ ನಾಡು ಒಂದಾದ ದಿನ ಇದಾಗಿದೆ. ಮನುಷ್ಯತ್ವ ಇರಲಿ, ಭಾಷೆ ವಿಚಾರದಲ್ಲಿ ಸಿಕ್ಕಾಪಟ್ಟೆ ಉದಾರತೆ ಬೇಡ ಎಂದು ಹೇಳಿದ್ದಾರೆ.

ಮಾತೃಭಾಷೆಯಲ್ಲಿ ಶಿಕ್ಷಣ ಕುರಿತಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಕುರಿತು ಚರ್ಚಿಸಲು ಪ್ರಧಾನಿ ಮತ್ತು ಬೇರೆ, ಬೇರೆ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ. ಮಾತೃಭಾಷೆಯಲ್ಲಿ ಶಿಕ್ಷಣ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರಬೇಕೆಂದು ಮನವಿ ಮಾಡಿದ್ದೆ. ಆದರೆ, ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...