alex Certify
ಕನ್ನಡ ದುನಿಯಾ       Mobile App
       

Kannada Duniya

ಬಜೆಟ್ ಅಧಿವೇಶನದ ನಂತರ ಸಂಪುಟ ವಿಸ್ತರಣೆ..?

30-1446144972-siddaramaiah

ಮುಖ್ಯಮಂತ್ರಿಯಾದಾಗಿನಿಂದಲೂ ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲಿಯೇ ಮಾಡುತ್ತೇನೆ ಎನ್ನುವ ಮೂಲಕ ಅತೃಪ್ತರ ಮೂಗಿಗೆ ತುಪ್ಪ ಸವರುತ್ತ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ರಾಜ್ಯದ ಬಜೆಟ್ ಅಧಿವೇಶನದ ಬಳಿಕ ಸಂಪುಟವನ್ನು ಭರ್ತಿ ಮಾಡುತ್ತೇನೆ ಎನ್ನುವ ಮೂಲಕ ಮತ್ತೆ ಕುತೂಹಲಕ್ಕೆ ಕಾರಣರಾಗಿದ್ದಾರೆ.

ಹೌದು. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಜೆಟ್ ಅಧಿವೇಶನದ ನಂತರ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದರು. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ದೆಹಲಿಗೆ ತೆರಳಿದ್ದು, ಏಕೆ ತೆರಳಿದ್ದಾರೆ ಎಂಬ ಕುರಿತು ತಮಗೆ ತಿಳಿದಿಲ್ಲ ಎಂದ ಸಿದ್ದರಾಮಯ್ಯ, ದೆಹಲಿಗೆ ಹೋಗುವಾಗ ನಮ್ಮನ್ನು ಕೇಳಿಯೇ ಹೋಗಬೇಕು ಎನ್ನುವ ನಿಯಮಗಳಿಲ್ಲ. ನಾನು ಸಹ ಶೀಘ್ರದಲ್ಲಿ ದೆಹಲಿಗೆ ತೆರಳುತ್ತಿದ್ದೇನೆ ಎನ್ನುವ ಮೂಲಕ ಅಚ್ಚರಿಗೆ ಕಾರಣರಾದರು.

ಅಲ್ಲದೇ ಇದೇ ಸಮಯದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ವಿಚಾರ ತಮಗೆ ತಿಳಿದಿಲ್ಲ ಎಂದರಲ್ಲದೇ ಕಾಂಗ್ರೆಸ್ ಪಕ್ಷ ಅಂತಹ ಮೈತ್ರಿಯ ಕುರಿತಾಗಿ ಯಾವುದೇ ಚಿಂತನೆ ನಡೆಸುವುದಿಲ್ಲ ಎಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...