alex Certify
ಕನ್ನಡ ದುನಿಯಾ       Mobile App
       

Kannada Duniya

ಮಾದೇಗೌಡರೊಂದಿಗೆ ಮೊಬೈಲ್ ನಲ್ಲಿ ಮಾತನಾಡಿದ ಸಿಎಂ

BANGALORE, OCTOBER 02, 2013 : Karnataka Chief Minister Siddaramaiah is seen in a Walk the Talk shoot with the chief editor of Indian Express, Shekhar Gupta at the Vidhana Soudha, Bangalore, for NDTV. (PHOTO BY JYOTHY KARAT)ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸಲು ಸಾಧ್ಯವಿಲ್ಲವೆಂದು ವಿಧಾನ ಮಂಡಲದ ಉಭಯ ಸದನದಲ್ಲಿ ಸರ್ವಾನುಮತದ ತೀರ್ಮಾನ ಕೈಗೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌಡರೊಂದಿಗೆ ಮೊಬೈಲ್ ಮೂಲಕ ಮಾತುಕತೆ ನಡೆಸಿದ್ದಾರೆ.

ಕಾವೇರಿ ಹಿತರಕ್ಷಣಾ ಸಮಿತಿ ವತಿಯಿಂದ ಇಂದು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಶಾಸಕ ಚೆಲುವರಾಯಸ್ವಾಮಿಯವರ ಮೊಬೈಲ್ ಮೂಲಕ ಮಾದೇಗೌಡರನ್ನು ಸಂಪರ್ಕಿಸಿದ ಮುಖ್ಯಮಂತ್ರಿಗಳು, ಸದನದಲ್ಲಿ ತೆಗೆದುಕೊಂಡ ತೀರ್ಮಾನದ ಕುರಿತು ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾದೇಗೌಡರು, ರೈತರ ಬೆಳೆಗೆ ಸೂಕ್ತ ಪರಿಹಾರ ನೀಡಬೇಕೆಂದು ಕೋರಿದರಲ್ಲದೇ ಕಾವೇರಿ ನದಿ ನೀರಿನ ಹೋರಾಟದಲ್ಲಿ ಪಾಲ್ಗೊಂಡು ಬಂಧಿತರಾಗಿ ಜೈಲಿನಲ್ಲಿರುವ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...