alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಮುಂಡೇಶ್ವರಿ ಮಾತ್ರವಲ್ಲ, ಈ ಕ್ಷೇತ್ರದಿಂದಲೂ ಸಿ.ಎಂ. ಸ್ಪರ್ಧೆ…?

ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಟ್ಟಿದ್ದು, ತಮ್ಮ ಹಳೆ ಕ್ಷೇತ್ರ ಚಾಮುಂಡೇಶ್ವರಿಯಿಂದ ಕಣಕ್ಕಿಳಿಯಲಿದ್ದಾರೆ.

ಈಗಾಗಲೇ ಸಿ.ಎಂ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಅವರಿಗೆ ಬೇರೆ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವಂತೆ ಒತ್ತಡ ಕೇಳಿ ಬಂದಿದೆ. ಕೋಲಾರ, ಚಿತ್ರದುರ್ಗ, ಬಾಗಲಕೋಟೆ, ಕೊಪ್ಪಳ ಮೊದಲಾದ ಜಿಲ್ಲೆಗಳಿಂದ ಸ್ಪರ್ಧಿಸುವಂತೆ ಸಿ.ಎಂ.ಗೆ ಒತ್ತಡವಿದೆ. ಆದರೆ, ಸಿ.ಎಂ. ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಳಗಾವಿ ವಿಭಾಗೀಯ ಕಾಂಗ್ರೆಸ್ ಉಸ್ತುವಾರಿ ಮಾಣಿಕ್ಯಂ ಠಾಕೂರ್, ಬಾದಾಮಿಯಲ್ಲಿ ಸಿದ್ಧರಾಮಯ್ಯ ಸ್ಪರ್ಧೆಯ ಕುರಿತು ಪ್ರತಿಕ್ರಿಯೆ ನೀಡಿ, ಸಿದ್ಧರಾಮಯ್ಯ ಜನಪ್ರಿಯ ನಾಯಕರಾಗಿದ್ದಾರೆ. ಅವರು ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ರೂ ಗೆಲುವು ಸಾಧಿಸ್ತಾರೆ ಎಂದು ಹೇಳಿದ್ದಾರೆ.

ಬಾದಾಮಿಯಲ್ಲಿ ಅವರ ಸ್ಪರ್ಧೆ ಬಗ್ಗೆ ಒತ್ತಡವಿದ್ದು, ಈ ಕುರಿತು ಚರ್ಚೆ ನಡೆದಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿ.ಎಂ. 1 ಲಕ್ಷ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ. ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದ್ರೂ 1 ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...