alex Certify
ಕನ್ನಡ ದುನಿಯಾ       Mobile App
       

Kannada Duniya

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವದಲ್ಲಿದ್ದು, ಸರ್ಕಾರ ಸುಗಮವಾಗಿ ನಡೆದುಕೊಂಡು ಹೋಗಲೆಂಬ ಉದ್ದೇಶದಿಂದ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮನ್ವಯ ಸಮಿತಿಯ ಮುಖ್ಯಸ್ಥರಾಗಿದ್ದು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹಾಗೂ ಜೆಡಿಎಸ್ ರಾಷ್ಟ್ರೀಯ ಕಾರ್ಯದರ್ಶಿ ಡ್ಯಾನಿಷ್ ಆಲಿ ಸಮನ್ವಯ ಸಮಿತಿಯ ಸದಸ್ಯರಾಗಿದ್ದಾರೆ.

ಈ ಮಧ್ಯೆ ಸಿದ್ದರಾಮಯ್ಯನವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿಯೂ ನೇಮಿಸಲಾಗುತ್ತದೆ ಎಂದು ಹಬ್ಬಿರುವ ಊಹಾಪೋಹದ ಕುರಿತು ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ತಾವಿಲ್ಲ ಎಂದು ತಿಳಿಸಿದ್ದಾರೆ.

ಅಲ್ಲದೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಬಜೆಟ್ ಮಂಡಿಸಲು ಮುಂದಾಗಿರುವುದಕ್ಕೆ ಆಕ್ಷೇಪಿಸಿರುವ ಸಿದ್ದರಾಮಯ್ಯ, ತಾವು ಈಗಾಗಲೇ ಪೂರ್ಣ ಬಜೆಟ್ ಮಂಡಿಸಿರುವ ಕಾರಣ ಪೂರಕ ಬಜೆಟ್ ಮಂಡಿಸಿದರೆ ಸಾಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...