alex Certify
ಕನ್ನಡ ದುನಿಯಾ       Mobile App
       

Kannada Duniya

ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮೈತ್ರಿ ಮಾಡಿಕೊಂಡಿದ್ದೇವೆ. ಈ ಸರ್ಕಾರ ಐದು ವರ್ಷಗಳ ಕಾಲ ನಡೆದುಕೊಂಡು ಹೋಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ನಡೆದ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಂತಿವನದ ಪ್ರಕೃತಿ ಚಿಕಿತ್ಸಾಲಯದಲ್ಲಿ ನಡೆದ ಮಾತುಕತೆಯ ವಿವರ ಬಹಿರಂಗವಾಗಿರುವುದರ ಕುರಿತು ಪ್ರತಿಕ್ರಿಯಿಸಿ ಯಾರೋ ಕಿಡಿಗೇಡಿಗಳು ವಿಡಿಯೋ ಮಾಡಿ ಬಹಿರಂಗಪಡಿಸಿದ್ದಾರೆ. ಯಾವ ಸಂದರ್ಭದಲ್ಲಿ ಮಾತನಾಡಿದ್ದೇನೆ ಎಂದು ಯಾರಿಗೂ ಗೊತ್ತಿಲ್ಲ. ಅದು ಅಧಿಕೃತವಾಗುತ್ತದೆಯೇ ಎಂದು ಮಾಧ್ಯಮ ಪ್ರತಿನಿಧಿಗಳನ್ನು ಪ್ರಶ್ನಿಸಿದರು.

ಮೈತ್ರಿಕೂಟ ಸರ್ಕಾರ ಸುಭದ್ರವಾಗಿರುತ್ತದೆ ಎಂದು ಹೇಳಿದ ಸಿದ್ದರಾಮಯ್ಯನವರು ಇದರ ಬಗ್ಗೆ ಯಾವುದೇ ಅನುಮಾನ ಬೇಡ. ನಾವೆಲ್ಲರೂ ಒಗ್ಗಟ್ಟಾಗಿ ಇದ್ದೇವೆ ಎಂದು ತಿಳಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...