alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದು ಬೆಂಗಳೂರಿಗೆ ಮರಳಲಿರುವ ಸಿದ್ದರಾಮಯ್ಯ ಉರುಳಿಸ್ತಾರಾ ಹೊಸ ದಾಳ?

ಚಿಕಿತ್ಸೆಗೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹನ್ನೆರಡು ದಿನಗಳ ಚಿಕಿತ್ಸೆ ಬಳಿಕ ಹೊಸ ಹುರುಪಿನೊಂದಿಗೆ ಬೆಂಗಳೂರಿಗೆ ಮರಳುತ್ತಿದ್ದಾರೆ.

ಶಾಂತಿವನದಲ್ಲಿ ವಿಶ್ರಾಂತಿಯಲ್ಲಿದ್ದಾಗಲೇ ಆಪ್ತರೊಂದಿಗೆ ಸಭೆ ನಡೆಸಿ ಮೈತ್ರಿ ಕೂಟ ಸರ್ಕಾರದ ಆಯುಷ್ಯದ ಕುರಿತು ಹೇಳಿಕೆ ನೀಡುವ ಮೂಲಕ ಶಾಕ್ ನೀಡಿದ್ದ ಸಿದ್ದರಾಮಯ್ಯನವರು ಬೆಂಗಳೂರಿಗೆ ಮರಳಿದ ನಂತರ ಇನ್ಯಾವ ದಾಳ ಉರುಳಿಸಲಿದ್ದಾರೆಂಬುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಸುಗಮವಾಗಿ ನಡೆದುಕೊಂಡು ಹೋಗಲು ರಚಿಸಲಾದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ, ಜುಲೈ 5 ರಂದು ಬಜೆಟ್ ಮಂಡನೆಗೂ ಮುನ್ನ ನಡೆಯಲಿರುವ ಸಭೆಯಲ್ಲಿ ಯಾವ ರೀತಿ ಪ್ರತಿಕ್ರಿಯಿಸುತ್ತಾರೆಂಬುದನ್ನು ಕಾದುನೋಡಬೇಕಿದೆ.

ಹೊಸ ಬಜೆಟ್ ಮಂಡನೆಗೆ ಆರಂಭದಿಂದಲೂ ವಿರೋಧ ವ್ಯಕ್ತಪಡಿಸಿಕೊಂಡು ಬಂದಿರುವ ಸಿದ್ದರಾಮಯ್ಯ, ಈಗಲೂ ಅದೇ ನಿಲುವನ್ನು ಮುಂದುವರೆಸಿದ್ದು, ಸಮನ್ವಯ ಸಮಿತಿ ಸಭೆಯಲ್ಲಿ ಯಾವ ತೀರ್ಮಾನ ಕೈಗೊಳ್ಳಲಾಗುತ್ತದೆಂಬುದರ ಕುರಿತು ಈಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...