alex Certify
ಕನ್ನಡ ದುನಿಯಾ       Mobile App
       

Kannada Duniya

ಕುತೂಹಲಕ್ಕೆ ಕಾರಣವಾಗಿದೆ ಸಚಿವ ರಮೇಶ್ ಜಾರಕಿಹೊಳಿ ಮತ್ತು ತಂಡದ ಧರ್ಮಸ್ಥಳ ಭೇಟಿ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಜುಲೈ 5 ರಂದು ಪರಿಷ್ಕೃತ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿರುವಾಗಲೇ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆಲ ಶಾಸಕರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಲು ಧರ್ಮಸ್ಥಳಕ್ಕೆ ದೌಡಾಯಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಪೂರ್ಣ ಪ್ರಮಾಣದ ಬಜೆಟ್ ಮಂಡನೆಗೆ ಆರಂಭದಿಂದಲೂ ವಿರೋಧ ವ್ಯಕ್ತಪಡಿಸುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ನಾಳೆ ಡಿಸ್ಚಾರ್ಜ್ ಅಗಲಿದ್ದಾರೆ. ಅಂದೇ ಬೆಂಗಳೂರಿಗೆ ವಾಪಸಾಗುತ್ತಿದ್ದರೂ ಬೆಂಬಲಿಗ ಶಾಸಕರು ತರಾತುರಿಯಲ್ಲಿ ಇಂದು ಸಿದ್ದರಾಮಯ್ಯನವರನ್ನು ಭೇಟಿಯಾಗಲು ತೆರಳಿರುವುದು ಹಲವು ಪ್ರಶ್ನೆಗಳು ಮೂಡುವಂತೆ ಮಾಡಿದೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸಚಿವ ರಮೇಶ್ ಜಾರಕಿಹೊಳಿ, ನಾವು ನಮ್ಮ ನಾಯಕರನ್ನು ಭೇಟಿಯಾಗಲು ಹೋಗುತ್ತಿದ್ದೇವೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ. ಅವರ ಆರೋಗ್ಯ ವಿಚಾರಿಸುತ್ತೇವೆ ಹೊರತು ರಾಜಕೀಯ ಚರ್ಚೆ ನಡೆಸುವುದಿಲ್ಲ ಎಂದು ಹೇಳಿದ್ದರೂ ಕಾಂಗ್ರೆಸ್ ಮುಖಂಡರ ಈ ಭೇಟಿ ರಾಜಕೀಯ ಕಾರಣಗಳಿಗಾಗಿ ಮಹತ್ವ ಪಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...