alex Certify
ಕನ್ನಡ ದುನಿಯಾ       Mobile App
       

Kannada Duniya

ಸಮ್ಮಿಶ್ರ ಸರ್ಕಾರಕ್ಕೆ ಹೊಸ ಕಂಟಕ: ಬಜೆಟ್ ಮಂಡನೆ ಕುರಿತು ದೋಸ್ತಿಗಳ ‘ಭಿನ್ನ’ರಾಗ

ವಿಧಾನ ಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಚಿವ ಸಂಪುಟ ರಚನೆಯಾದ ಬಳಿಕ ಸ್ಥಾನ ವಂಚಿತರು ಸರಣಿ ಸಭೆಗಳನ್ನು ನಡೆಸುವ ಮೂಲಕ ಸರ್ಕಾರಕ್ಕೆ ಆತಂಕ ತಂದೊಡ್ಡಿದ್ದರು.

ಉಭಯ ಪಕ್ಷಗಳ ನಾಯಕರು ಅತೃಪ್ತರ ಮನವೊಲಿಸಲು ಸಫಲರಾಗಿದ್ದರ ಮಧ್ಯೆ, ಈಗ ಬಜೆಟ್ ಮಂಡನೆ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡುವೆ ಜಟಾಪಟಿ ಆರಂಭವಾಗಿದೆ.

ವಿಧಾನಸಭಾ ಚುನಾವಣೆ ಪೂರ್ವದಲ್ಲೇ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು 2018-19 ನೇ ಸಾಲಿನ ಬಜೆಟ್ ಮಂಡಿಸಿದ್ದರು. ಆದರೆ ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಹೊಸ ಬಜೆಟ್ ಮಂಡಿಸಲು ಮುಂದಾಗಿರುವುದು ತಿಕ್ಕಾಟಕ್ಕೆ ಕಾರಣವಾಗಿದೆ.

ತಮ್ಮ ಸರ್ಕಾರ ಪೂರ್ಣಾವಧಿ ಬಜೆಟ್ ಮಂಡಿಸಿ ನಾಲ್ಕು ತಿಂಗಳಿಗೆ ಲೇಖಾನುದಾನವನ್ನು ಪಡೆದುಕೊಂಡಿತ್ತು. ಹೀಗಾಗಿ ಹೊಸ ಬಜೆಟ್ ಮಂಡಿಸುವ ಬದಲು ಪೂರಕ ಬಜೆಟ್ ಮಂಡಿಸಿದರೆ ಸೂಕ್ತ ಎಂದು ಸಿದ್ದರಾಮಯ್ಯನವರು ಹೇಳುತ್ತಿದ್ದರೆ ಕುಮಾರಸ್ವಾಮಿಯವರು ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿರುವುದರಿಂದ ಹೊಸ ಬಜೆಟ್ ಮಂಡಿಸಿಯೇ ಸಿದ್ಧ ಎನ್ನುತ್ತಿದ್ದಾರೆ. ಹೀಗಾಗಿ ಬಜೆಟ್ ಕುರಿತ ಜಟಾಪಟಿ ಯಾವ ಹಂತಕ್ಕೆ ಹೋಗಿ ತಲುಪುತ್ತದೆ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...