alex Certify
ಕನ್ನಡ ದುನಿಯಾ       Mobile App
       

Kannada Duniya

ಮೈತ್ರಿ ಕೂಟ ಸರ್ಕಾರದ ಕುರಿತು ಹೊಸ ಬಾಂಬ್ ಸಿಡಿಸಿದ ಮಾಜಿ ಸ್ಪೀಕರ್

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಕುರಿತು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಹೊಸ ಬಾಂಬ್ ಸಿಡಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಕೆಲ ಕಾಂಗ್ರೆಸ್ ನಾಯಕರೇ ತೊಂದರೆ ಕೊಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕರೂ ಆಗಿರುವ ಕೋಳಿವಾಡ, ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಂತೆ ರಾಜ್ಯದಲ್ಲಿ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದರೆ ರಾಜ್ಯದ ಕೆಲ ಕಾಂಗ್ರೆಸ್ ನಾಯಕರಿಗೆ ಈ ಸರ್ಕಾರ ಮುಂದುವರಿಯುವುದು ಬೇಕಿಲ್ಲದ ಕಾರಣ ಹೀಗೆ ಮಾಡುತ್ತಿದ್ದಾರೆಂದು ತಿಳಿಸಿದ್ದಾರೆ.

ಪರೋಕ್ಷವಾಗಿ ಸಿದ್ದರಾಮಯ್ಯನವರ ವಿರುದ್ಧ ಕಿಡಿಕಾರಿರುವ ಕೆ.ಬಿ. ಕೋಳಿವಾಡ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರು ಹೈಕಮಾಂಡ್ ಸೂಚನೆಯಂತೆ ಮೈತ್ರಿಕೂಟ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ. ಇದು ಕೆಲವರಿಗೆ ಸಹಿಸಲಾಗುತ್ತಿಲ್ಲ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...