alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ಕುರಿತು ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.

ಅದಾದ ಬಳಿಕ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಲು ವಿಫಲವಾಗಿದ್ದು, ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಡಿ.ಕೆ. ಶಿವಕುಮಾರ್, ನಮ್ಮಿಂದ ತಪ್ಪಾಯ್ತು ಎಂದು ಬಹಿರಂಗ ಕ್ಷಮೆ ಯಾಚಿಸಿದ್ದರು.

ಡಿ.ಕೆ. ಶಿವಕುಮಾರ್ ಅವರ ಕ್ಷಮೆಯಾಚನೆಯನ್ನು ತಳ್ಳಿ ಹಾಕಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಗ ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

ಗದಗಿನ ತೋಂಟದಾರ್ಯ ಮಠದಲ್ಲಿ ಭಾನುವಾರ ನಡೆದ ಡಾ. ತೋಂಟದ ಸಿದ್ದಲಿಂಗ ಶ್ರೀಗಳ ಪುಣ್ಯ ಸ್ಮರಣೋತ್ಸವದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಲಿಂಗಾಯಿತ ಧರ್ಮವನ್ನು ಒಡೆದೆವೆಂಬ ಆರೋಪದಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು ನಿಜ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಸಚಿವ ಸಂಪುಟದಲ್ಲಿ ಚರ್ಚಿಸಿಯೇ ಲಿಂಗಾಯತ ಸ್ವತಂತ್ರ ಧರ್ಮದ ಕುರಿತು ತೀರ್ಮಾನ ಕೈಗೊಳ್ಳಲಾಗಿತ್ತು. ಆದರೂ ಸಿದ್ದರಾಮಯ್ಯ ಧರ್ಮ ಹೊಡೆದರು ಎಂಬ ಆರೋಪಕ್ಕೆ ನಾನು ಗುರಿಯಾದೆ. ಇದರಿಂದ ತೊಂದರೆಯೂ ಆಯಿತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...