alex Certify
ಕನ್ನಡ ದುನಿಯಾ       Mobile App
       

Kannada Duniya

ಅಹಿಂದ ಶಾಸಕರ ಪರ ಲಾಬಿಗಿಳಿದ ಸಿದ್ದು…!

ರಾಜ್ಯದ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರದ ಮಂತ್ರಿಮಂಡಲ ರಚನೆ ಕುರಿತು ನವದೆಹಲಿಯಲ್ಲಿ ನಡೆಯುತ್ತಿರುವ ಹಗ್ಗಜಗ್ಗಾಟದ ಸಭೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಹಿಂದ ಶಾಸಕರ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.

ರಾಜ್ಯದಲ್ಲಿ ಒಟ್ಟು 78 ಶಾಸಕರು ಕಾಂಗ್ರೆಸ್ ನಿಂದ ಗೆದ್ದು ಬಂದಿದ್ದು, ಇದರಲ್ಲಿ 54 ಮಂದಿ ಅಹಿಂದ ಶಾಸಕರಿದ್ದಾರೆ. ರಾಜ್ಯದಲ್ಲಿ ಜನ ಕಾಂಗ್ರೆಸ್ ಪಕ್ಷದ ಪರವಾಗಿ ಅಹಿಂದದಿಂದ ಅತಿ ಹೆಚ್ಚಿನ ಶಾಸಕರನ್ನು ಆಯ್ಕೆ ಮಾಡಿ ವಿಧಾನಸಭೆಗೆ ಕಳುಹಿಸಿದ್ದಾರೆ.

ಜನರ ಈ ಜನಾದೇಶಕ್ಕೆ ನಾವು ಸಹ ತಲೆಬಾಗಬೇಕಿದೆ. ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯದವರಿಗೂ ಹೆಚ್ಚಿನ ಸಚಿವ ಸ್ಥಾನಗಳನ್ನು ನೀಡುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ಅನುವು ಮಾಡಿಕೊಡಬೇಕೆಂದು ಸಭೆಯಲ್ಲಿ ಸಿದ್ದರಾಮಯ್ಯ ಕೋರಿರುವುದಾಗಿ ಮೂಲಗಳು ತಿಳಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...