alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಶಾಸಕರ ಅಸಮಾಧಾನಕ್ಕೆ ಬ್ರೇಕ್ ಹಾಕ್ತಾರಾ ಸಿದ್ದು…?

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿದೇಶ ಪ್ರವಾಸ ಮುಗಿಸಿ ವಾಪಾಸ್ ಆಗುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಇಂದು ಸಿದ್ದರಾಮಯ್ಯನವರ ಬೆಂಗಳೂರಿನ ಕಾವೇರಿ ನಿವಾಸ ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿ ಪರಿಣಮಿಸಿದೆ.

ಕಾಂಗ್ರೆಸ್ ನಾಯಕರಲ್ಲಿ ಉಂಟಾಗಿರುವ ಭಿನ್ನಮತ ಶಮನಗೊಳಿಸುವ ನಿಟ್ಟಿನಲ್ಲಿ ಅಖಾಡಕ್ಕೆ ಇಳಿದಿರುವ ಸಿದ್ದರಾಮಯ್ಯ, ಹಲವು ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನಗೊಂಡಿರುವ ಶಾಸಕರು, ಸಚಿವರು ಇಂದು ಸಿದ್ದರಾಮಯ್ಯನವರನ್ನು ಭೇಟಿಯಾಗಿ ತಮ್ಮ ಅಸಮಾಧಾನ ಹೊರಹಾಕಲಿದ್ದಾರೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಕಾವೇರಿ ನಿವಾಸದತ್ತ ಎಲ್ಲರ ಚಿತ್ತ ನೆಟ್ಟಿದೆ. ಈಗಾಗಲೇ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಅವರು ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ವಿಶೇಷವಾಗಿ ಬೆಳಗಾವಿ ಭಿನ್ನಮತಕ್ಕೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ಕೂಡ ಸಿದ್ದರಾಮಯ್ಯನವರನ್ನು ಭೇಟಿಯಾಗಲಿದ್ದು, ಬೆಳಗಾವಿಯಲ್ಲಿನ ರಾಜಕೀಯ ಬೆಳವಣಿಗೆ, ತಮ್ಮ ಅಸಮಾಧಾನ, ಬೇಡಿಕೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಅಲ್ಲದೇ ತಮ್ಮ ಮುಂದಿನ ರಾಜಕೀಯ ನಡೆಯ ಕುರಿತಾಗಿಯೂ ಈ ವೇಳೆ ಮಹತ್ವದ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.

ಒಟ್ಟಾರೆ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಲ್ಲಿ ಭುಗಿಲೆದ್ದಿರುವ ಅಸಮಾಧಾನವನ್ನು ತಣ್ಣಗೆ ಮಾಡುವ ಜವಾಬ್ದಾರಿಯನ್ನು ಹೊತ್ತಿದ್ದು, ನಾಯಕರ ಅಸಮಾಧಾನಕ್ಕೆ ಬ್ರೇಕ್ ಹಾಕಿ, ಸಮ್ಮಿಶ್ರ ಸರ್ಕಾರವನ್ನು ಸುಭದ್ರ ಮಾಡುವಲ್ಲಿ ಯಶಸ್ವಿಯಾಗುತ್ತಾರೆಯೇ ಎಂಬ ಕುತೂಹಲ ಎಲ್ಲರಲ್ಲೂ ಮನೆಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...