alex Certify
ಕನ್ನಡ ದುನಿಯಾ       Mobile App
       

Kannada Duniya

ಭಿನ್ನಮತೀಯರ ಪಾಳೆಯ ತೊರೆದ ಮಾಜಿ ಸಚಿವ

baburao-chinchanasoor-64ತಮಗೆ ಸಚಿವ ಸ್ಥಾನದಿಂದ ಕೈ ಬಿಟ್ಟಿರುವ ಹಿನ್ನಲೆಯಲ್ಲಿ ಆಕ್ರೋಶಗೊಂಡಿದ್ದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್, ಈಗ ಭಿನ್ನಮತೀಯರ ಪಾಳೆಯದಿಂದ ದೂರವುಳಿಯುವ ನಿರ್ಧಾರಕ್ಕೆ ಬಂದಿದ್ದಾರೆಂದು ಹೇಳಲಾಗಿದೆ.

ಮಾಜಿ ಸಚಿವರುಗಳಾದ ಅಂಬರೀಷ್, ವಿ. ಶ್ರೀನಿವಾಸ್ ರವರ ನೇತೃತ್ವದಲ್ಲಿ ಭಾನುವಾರದಂದು ಬೆಂಗಳೂರಿನಲ್ಲಿ ಅತೃಪ್ತ ಶಾಸಕರು ಹಾಗೂ ಸ್ಥಾನ ಕಳೆದುಕೊಂಡ ಸಚಿವರ ಸಭೆ ನಡೆಸಲು ನಿರ್ಧರಿಸಲಾಗಿದ್ದು, ಆದರೆ ಇದರಲ್ಲಿ ಭಾಗವಹಿಸದಿರಲು ತೀರ್ಮಾನಿಸಿರುವ ಬಾಬುರಾವ್ ಚಿಂಚನಸೂರ್, ಯಾದಗಿರಿಗೆ ತೆರಳಿದ್ದಾರೆನ್ನಲಾಗಿದೆ.

ಲೋಕಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಾಬುರಾವ್ ಚಿಂಚನಸೂರ್ ಅವರೊಂದಿಗೆ ಮಾತುಕತೆ ನಡೆಸಿ ಭಿನ್ನಮತೀಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಿರುವಂತೆ ಸೂಚಿಸಿರುವ ಹಿನ್ನಲೆಯಲ್ಲಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆನ್ನಲಾಗಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವ ಕುರಿತು ಖರ್ಗೆ ಭರವಸೆ ನೀಡಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...