alex Certify
ಕನ್ನಡ ದುನಿಯಾ       Mobile App
       

Kannada Duniya

‘ಪ್ರಕೃತಿ’ ಚಿಕಿತ್ಸಾಲಯದಲ್ಲೇ ಸಿದ್ದರಾಮಯ್ಯರಿಂದ ಬೆಂಬಲಿಗ ಶಾಸಕರೊಂದಿಗೆ ಮೀಟಿಂಗ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರ ಮಧ್ಯೆ ಆಪ್ತ ಶಾಸಕರೊಂದಿಗೆ ಮೀಟಿಂಗ್ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಯಶವಂತಪುರ ಕ್ಷೇತ್ರದ ಶಾಸಕ ಸೋಮಶೇಖರ್ ಸೇರಿದಂತೆ ಹಲವರು ಪ್ರಕೃತಿ ಚಿಕಿತ್ಸಾಲಯಕ್ಕೆ ಆಗಮಿಸಿ ಸಿದ್ದರಾಮಯ್ಯನವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಮಾತುಕತೆ ವೇಳೆ ಹೊಸ ಸರ್ಕಾರದ ಬಜೆಟ್ ಹಾಗೂ ಸಾಲ ಮನ್ನಾ ಕುರಿತು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದು, ಬಜೆಟ್ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಿಲುವಿಗೆ ಬೆಂಬಲಿಸಿರುವುದಕ್ಕೂ ಆಕ್ಷೇಪಿಸಿದ್ದಾರೆನ್ನಲಾಗಿದೆ.

ನೂತನ ಸರ್ಕಾರ ಜುಲೈ 5 ರಂದು ಹೊಸ ಬಜೆಟ್ ಮಂಡನೆ ಮಾಡುತ್ತಿರುವ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಆಪ್ತ ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...