alex Certify
ಕನ್ನಡ ದುನಿಯಾ       Mobile App
       

Kannada Duniya

ರೈತರನ್ನು ಕಡೆಗಣಿಸಿದ ಕೇಂದ್ರ ಬಜೆಟ್: ಸಿದ್ದರಾಮಯ್ಯ

17BG_SIDDARAMAIAH__1898844e

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಿದ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಬಜೆಟ್ ರೈತರ ಪರವಾಗಿಲ್ಲ, ಹಾಗಾಗಿ ಇದೊಂದು ನಿರಾಶಾದಾಯಕ ಬಜೆಟ್ ಎಂದು ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಬಜೆಟ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಕೇಂದ್ರ ಸಚಿವ ಅರುಣ್ ಜೇಟ್ಲಿ ತ್ವರಿತ ನೀರಾವರಿಗೆ ಹೆಚ್ಚಿನ ಹಣ ಕೊಡುತ್ತೇವೆ ಎಂದು ಭರವಸೆ ನೀಡಿದ್ದು ಇದೀಗ ಈ ಭರವಸೆ ಹುಸಿಯಾಗಿದೆ ಎಂದು ತಿಳಿಸಿದರು. ಅಲ್ಲದೇ ನೀರಾವರಿ ಕ್ಷೇತ್ರಕ್ಕೆ ಕೇವಲ 1775 ಕೋಟಿ ರೂಪಾಯಿಗಳನ್ನು ಮೀಸಲಿರಿಸಿದ್ದು, ಇದರಿಂದ ರೈತರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ.

2021 ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುತ್ತೇನೆ ಎಂದು ಪ್ರಧಾನಿ ಮೋದಿ ನೀಡಿದ ಹೇಳಿಕೆ ಕುರಿತಾಗಿ ಬಜೆಟ್‌ ನಲ್ಲಿ ಯಾವುದೇ ಉಲ್ಲೇಖವಿಲ್ಲ. ‘ಮನ್ ಕಿ ಬಾತ್‌’ ನಲ್ಲಿ ರೈತರ ಪರ ಕಾಳಜಿ ವ್ಯಕ್ತಪಡಿಸಿದ ಪ್ರಧಾನಿ ಮೋದಿ ಅವರು, ಅದೇ ಕಾಳಜಿಯನ್ನು ಬಜೆಟ್‌ ನಲ್ಲಿ ರೈತರ ಪರವಾಗಿ ತೋರಿಸಿಲ್ಲ ಎಂದಿರುವ ಸಿದ್ದರಾಮಯ್ಯ, ಉದ್ಯೋಗ ಖಾತ್ರಿ ಯೋಜನೆಗೆ ಕೇವಲ 4500 ಕೋಟಿ ರೂ. ನೀಡಲಾಗಿದ್ದು ಇನ್ನಷ್ಟು ಹಣ ಮೀಸಲಿಡಬಹುದಿತ್ತು ಎಂದು ತಿಳಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...