alex Certify
ಕನ್ನಡ ದುನಿಯಾ       Mobile App
       

Kannada Duniya

ಸೂಟು-ಬೂಟು ಧರಿಸಿ ವಿದೇಶ ಪ್ರವಾಸಕ್ಕೆ ಹೊರಟ ಸಿದ್ದರಾಮಯ್ಯ

ಬೆಂಗಳೂರು: ರಾಜಕೀಯದ ನಡುವೆ ಬಿಡುವು ಮಾಡಿಕೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇಂದು 10 ದಿನಗಳ ವಿದೇಶ ಪ್ರವಾಸಕ್ಕೆ ಹೊರಟಿದ್ದಾರೆ. ಸದಾ ಬಿಳಿ ಶರ್ಟ್, ಬಿಳಿ ಪಂಚೆಯಲ್ಲಿ ಗ್ರಾಮೀಣ ಸೊಗಡಿನಲ್ಲಿ ಮಿಂಚುವ ಸಿದ್ದರಾಮಯ್ಯ, ಇಂದು ಹೊಸ ಬೂದು ಬಣ್ಣದ ಸೂಟು-ಬೂಟು, ಕನ್ನಡಕ ಧರಿಸಿ ಗಮನ ಸೆಳೆದರು.

10 ದಿನಗಳ ಯುರೋಪ್ ಪ್ರವಾಸಕ್ಕೆ ತೆರಳಿರುವ ಸಿದ್ದರಾಮಯ್ಯ ಅವರಿಗೆ ಪುತ್ರ ಯತೀಂದ್ರ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಸಾಥ್ ನೀಡಿದ್ದಾರೆ. ಸಿದ್ದರಾಮಯ್ಯ ವಿದೇಶಕ್ಕೆ ತೆರಳುವ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ನಿವಾಸ ಕಾವೇರಿ ಬಳಿ ಹಲವು ನಾಯಕರು, ಸಚಿವರು ಜಮಾಯಿಸಿ ಶುಭ ಕೋರಿದರು.

ಅಲ್ಲದೇ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸಚಿವ ಜಮೀರ್​ ಅಹ್ಮದ್​ ಖಾನ್​, ವೆಂಕಟರಮಣಪ್ಪ, ಬಸವಕಲ್ಯಾಣ ಶಾಸಕ ನಾರಾಯಣ ರಾವ್, ಶಾಸಕ ಬೈರತಿ ಬಸವರಾಜ್​ ಮತ್ತಿತರರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ತೆರಳಿ ಬೀಳ್ಕೊಟ್ಟರು.

ಸಿದ್ದರಾಮಯ್ಯನವರ ಯುರೋಪ್ ಪ್ರವಾಸ ರಾಜಕೀಯ ವಲಯದಲ್ಲಿ ಹಲವು ಚರ್ಚೆ ಹಾಗೂ ಕುತೂಹಲಗಳಿಗೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಶಿಬಿರ ಶಾಂತಿವನದಲ್ಲಿದ್ದ ಸಿದ್ದರಾಮಯ್ಯ ಅಲ್ಲಿಂದಲೇ ತಮ್ಮ ರಾಜಕೀಯ ಚಟುವಟಿಕೆಗಳನ್ನು ಆರಂಭಿಸಿದ್ದರು. ಈಗ ದೂರದ ಯುರೋಪ್ ಗೆ ತೆರಳಿರುವ ಸಿದ್ದರಾಮಯ್ಯ ಇನ್ನಾವ ರಾಜಕೀಯ ತಂತ್ರಗಳನ್ನು ಹೆಣೆದು ತರಲಿದ್ದಾರೆ ಎಂಬುದು ಹಲವರ ಆತಂಕಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...