alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಭಾಪತಿ’ ಸ್ಥಾನ ಕುರಿತಂತೆ ಕಾಂಗ್ರೆಸ್ ನಲ್ಲಿ ಮತ್ತೆ ಮುಸುಕಿನ ಗುದ್ದಾಟ

ಧರ್ಮಸ್ಥಳದ ಶಾಂತಿವನದಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ರಾಜ್ಯ ಸರ್ಕಾರದ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಆತ್ಮೀಯರ ಸಮ್ಮುಖದಲ್ಲಿ ಆಡಿದ್ದ ಕೆಲ ಮಾತುಗಳು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು.

ಸಿದ್ದರಾಮಯ್ಯನವರು ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದು ಹೊರಬಂದ ಬಳಿಕ ನಡೆದ ಸಮನ್ವಯ ಸಮಿತಿ ಸಭೆ ವೇಳೆ ಈ ಕುರಿತ ಗೊಂದಲ ಬಗೆಹರಿದಿದ್ದು, ಬಳಿಕ ಮಾತನಾಡಿದ್ದ ಸಿದ್ದರಾಮಯ್ಯನವರು ತಾವು ಯಾವ ಸಂದರ್ಭದಲ್ಲಿ ಮಾತನಾಡಿದ್ದೆ ಎಂಬುದನ್ನು ಪರಿಶೀಲಿಸದೆ ಕೆಲವರು ವಿಡಿಯೋ ಬಿಡುಗಡೆ ಮಾಡುವ ಮೂಲಕ ಗೊಂದಲ ಸೃಷ್ಟಿಸಿದ್ದರು ಎಂದು ಹೇಳಿದ್ದರು.

ಮೈತ್ರಿಕೂಟ ಸರ್ಕಾರದಲ್ಲಿ ಈಗ ಎಲ್ಲ ಗೊಂದಲ ಬಗೆಹರಿದಿದೆ ಎಂದು ಭಾವಿಸುತ್ತಿರುವಾಗಲೇ ಮತ್ತೊಂದು ಸಮಸ್ಯೆ ತಲೆದೋರಿದೆ. ವಿಧಾನಪರಿಷತ್ ಸಭಾಪತಿ ಸ್ಥಾನ ತಮ್ಮ ಪಕ್ಷಕ್ಕೆ ಬಿಟ್ಟುಕೊಡಬೇಕೆಂದು ಜೆಡಿಎಸ್ ಕೇಳುತ್ತಿದ್ದು, ಬಸವರಾಜ ಹೊರಟ್ಟಿಯವರನ್ನು ಸಭಾಪತಿಯನ್ನಾಗಿ ಮಾಡುವ ಇರಾದೆ ಹೊಂದಿದೆ. ಆದರೆ ತಮ್ಮ ಆತ್ಮೀಯ ಎಸ್.ಆರ್. ಪಾಟೀಲರನ್ನು ವಿಧಾನ ಪರಿಷತ್ ಸಭಾಪತಿಯನ್ನಾಗಿ ಮಾಡಲು ಸಿದ್ದರಾಮಯ್ಯ ಮುಂದಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸಭಾಪತಿ ಸ್ಥಾನ ನೀಡಲು ಪಟ್ಟು ಹಿಡಿದಿದ್ದಾರೆ. ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಈ ವಿಚಾರದಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಹೇಳಲಾಗಿದ್ದು, ಹೀಗಾಗಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...